ಉಡುಪಿಯಲ್ಲಿ ದಸರಾ ಆಚರಣೆಗೆ ಮಾರ್ಗಸೂಚಿ ಬಿಡುಗಡೆ ಮಾಡಿದ ಜಿಲ್ಲಾಧಿಕಾರಿ…

70
firstsuddi

ಉಡುಪಿ : ಜಿಲ್ಲೆಯಲ್ಲಿ ದಸರಾ ಆಚರಣೆಗೆ ಜಿಲ್ಲಾಧಿಕಾರಿ ಕೂರ್ಮ ರಾವ್ ಎಂ ಮಾರ್ಗಸೂಚಿ ಬಿಡುಗಡೆ ಮಾಡಿದ್ದಾರೆ.

1. ಅ.7ರಿಂದ ಅ.15 ರವರೆಗೆ ನಡೆಯುವ ದಸರಾ ಆಚರಣೆಯ ಕಾರ್ಯಕ್ರಮಗಳಲ್ಲಿ 400 ಕ್ಕಿಂತ ಹೆಚ್ಚು ಜನರು ಒಮ್ಮೆಲೆ ಸೇರುವಂತಿಲ್ಲ ಹಾಗೂ ಸಾಮಾಜಿಕ ಅಂತರವನ್ನು ಕಡ್ಡಾಯವಾಗಿ ಪಾಲಿಸತಕ್ಕದ್ದು.

2. ದಸರಾ ಆಚರಣೆಯಲ್ಲಿ ಸಾಮಾಜಿಕ ಅಂತರವಿಲ್ಲದೆ ನಡೆಸಲಾಗುವ ಎಲ್ಲಾ ಕಾರ್ಯಕ್ರಮಗಳನ್ನು ನಿಷೇಧಿಸಲಾಗುತ್ತದೆ.

3. ದೇವಾಲಯದಲ್ಲಿ ಕರ್ತವ್ಯ ನಿರ್ವಹಿಸುವ ಆಡಳಿತ ಮಂಡಳಿ ಅರ್ಚಕರು/ ಸಿಬ್ಬಂದಿಗಳು ಸೇರಿದಂತೆ ಎಲ್ಲಾ ವರ್ಗದವರು ಕೋವಿಡ್ ಸಮುಚಿತ ವರ್ತನೆಗಳನ್ನು ಕಡ್ಡಾಯವಾಗಿ ಪಾಲಿಸತಕ್ಕದ್ದು.

4. ಕಾರ್ಯಕ್ರಮದ ಆಯೋಜಕರು /ದೇವಸ್ಥಾನದ ಆಡಳಿತಾಧಿಕಾರಿಯವರು ಕಾರ್ಯಕ್ರಮ ನಡೆಯುವಲ್ಲಿ ಸ್ಯಾನಿಟೈಸರ್, ಮಾಸ್ಕ್ ಬಳಕೆ , ಸಾಮಾಜಿಕ ಅಂತರ ಪಾಲನೆಗೆ ಕ್ರಮಕೈಗೊಳ್ಳತಕ್ಕದ್ದು .

5. ಕೋವಿಡ್-19 ಸಾಂಕ್ರಾಮಿಕ ಸೋಂಕು ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಷ್ಟ್ರೀಯ ನಿರ್ದೇಶನಗಳನ್ನು ಹಾಗೂ ರಾಜ್ಯ ಸರ್ಕಾರವು ಹೊರಡಿಸಿದ ಮಾರ್ಗಸೂಚಿಗಳನ್ನು ತಪ್ಪದೇ ಕಟ್ಟುನಿಟ್ಟಾಗಿ ಪಾಲಿಸತಕ್ಕದು.

6. ಸಾರ್ವಜನಿಕರ ಆರೋಗ್ಯದ ದೃಷ್ಠಿಯಿಂದ ಆರೋಗ್ಯಇಲಾಖೆ,ಪೊಲೀಸ್ ಇಲಾಖೆ,ಅಗ್ನಿಶಾಮಕ ಇಲಾಖೆ, ಜಿಲ್ಲಾಡಳಿತ ಹಾಗೂ ಸ್ಥಳೀಯಸಂಸ್ಥೆ/ಪ್ರಾಧಿಕಾರಗಳಿಂದ ಹೊರಡಿಸಲಾಗುವ ಎಲ್ಲಾ ಆದೇಶ/ನಿರ್ದೇಶನ ಹಾಗೂ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸತಕ್ಕದ್ದು.