ಉಡುಪಿ: ನೂತನ ಹೊಸ ವರ್ಷ ಆರಂಭವಾಗುತ್ತಿದ್ದಂತೆ ಹಿರಿಯ ಪೊಲೀಸ್ ಅಧಿಕಾರಿಗಳ ವರ್ಗಾವಣೆ ಪ್ರಕ್ರಿಯೆ ಆರಂಭಗೊಂಡಿದ್ದು, ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ನಿಶಾ ಜೇಮ್ಸ್ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ನಿಶಾ ಜೇಮ್ಸ್ ಅವರ ಸ್ಥಳಕ್ಕೆ ಪ್ರಸ್ತುತ ಕಲಬುರ್ಗಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ಅಕ್ಷಯ್ ಹಾಕೆ ಮಚ್ಚಿಂದ್ರ ಅವರಿಗೆ ಭಡ್ತಿ ನೀಡಿ ಉಡುಪಿ ಜಿಲ್ಲೆಯ ನೂತನ ಎಸ್ಪಿಯಾಗಿ ನೇಮಕಗೊಳಿಸಿದೆ. ನಿಶಾ ಜೇಮ್ಸ್ ಅವರನ್ನು ಬೆಂಗಳೂರಿನ ಆಂತರಿಕ ಭದ್ರತಾ ವಿಭಾಗದ ಎಸ್ಪಿಯಾಗಿ ವರ್ಗಾವಣೆ ಮಾಡಿ ಸರಕಾರ ಆದೇಶ ಹೊರಡಿಸಿದೆ.










