ಚಿಕ್ಕಮಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿಯಾಗಿ ಮಾಜಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರೂ ಆಗಿದ್ದ ಎಂ.ಎಲ್.ಮೂರ್ತಿರವರನ್ನು ಎ.ಐ.ಸಿ.ಸಿ ನೇಮಕ ಮಾಡಿದೆ.
ಈ ಹಿಂದೆಯೂ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ ಅನುಭವ ಹೊಂದಿರುವ ಎಂ.ಎಲ್.ಮೂರ್ತಿರವರು ಚಿಕ್ಕಮಗಳೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ.
ಅವರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿದ್ದ ಸಂದರ್ಭದಲ್ಲಿ ಪಕ್ಷವನ್ನು ಶಿಸ್ತುಬದ್ಧವಾಗಿ ಮುನ್ನಡೆಸಿರುವ ಖ್ಯಾತಿ ಹೊಂದಿದ್ದು, ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿಯಾಗಿ ಮೂರ್ತಿರವರು ನೇಮಕಗೊಂಡ ಬೆನ್ನ ಹಿಂದೆಯೇ ಅವರನ್ನು ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದ ಪ್ರಚಾರ ಕಾರ್ಯಗಳು, ಚುನಾವಣೆ ಸಂಬಂಧಿಸಿದ ಕಾರ್ಯಕ್ರಮಗಳು ಮತ್ತು ಚಟುವಟಿಕೆಗಳ ಮೇಲುಸ್ತುವಾರಿಯಾಗಿ ಕೂಡಲೇ ಕಾರ್ಯಪ್ರವರ್ತರಾಗಲು ನೇಮಕ ಮಾಡಿ ಕೆ.ಪಿ.ಸಿ.ಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಆದೇಶಿಸಿದ್ದಾರೆ.










