ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪಡಿತರ ಮೂಲಕ ಕುಚ್ಚಲಕ್ಕಿ ವಿತರಿಸಲು ಕೇಂದ್ರ ಅನುಮೋದನೆ : ಶೋಭಾ ಕರಂದ್ಲಾಜೆ ಟ್ವೀಟ್

80
firstsuddi

ದಕ್ಷಿಣ ಕನ್ನಡ : ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಸ್ಥಳೀಯ ಕುಚ್ಚಲಕ್ಕಿ ಪ್ರಭೇದಗಳನ್ನು ಪಡಿತರ ವ್ಯವಸ್ಥೆಯಡಿಯಲ್ಲಿ ವಿತರಿಸಲು ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

ಸ್ಥಳೀಯ ರೈತರ ಹಾಗೂ ದಕ್ಷಿಣ ಕನ್ನಡ, ಉಡುಪಿ ಸಾರ್ವಜನಿಕರ ಬಹುಕಾಲದ ಬೇಡಿಕೆಯನ್ನು ಈಡೇರಿಸಿದ ಕೇಂದ್ರ ಸರ್ಕಾರಕ್ಕೆ ಹಾಗೂ ಕೇಂದ್ರ ಸಚಿವರಾದ ಶ್ರೀ ಪಿಯೂಷ್ ಗೋಯಲ್ ಅವರಿಗೆ ಶೋಭಾ ಕರಂಜ್ಲಾಜೆ ಅವರು ಧನ್ಯವಾದಗಳನ್ನು ಸಲ್ಲಿಸಿದ್ದಾರೆ.