ಉಡುಪಿ ಪೇಜಾವರ ಶ್ರೀಗಳಿಗೆ ಪಿತೃವಿಯೋಗ…

46
firstsuddi

ಮಂಗಳೂರು: ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರ ತಂದೆ ನಿಧನರಾಗಿದ್ದಾರೆ.

ಪೂರ್ವಾಶ್ರಮದ ತಂದೆ ಅಂಗಡಿಮಾರು ಕೃಷ್ಣಭಟ್ಟ ಇಂದು ದಕ್ಷಿಣ ಕನ್ನಡ ಜಿಲ್ಲೆಯ ಹಳೆಯಂಗಡಿ ಬಳಿಯ ಪಕ್ಷಿಕೆರೆಯಲ್ಲಿ ನಿಧನ ಹೊಂದಿದ್ದಾರೆ. ಇವರಿಗೆ 103 ವರ್ಷ ವಯಸ್ಸಾಗಿತ್ತು. ಇವರು ತುಳು ಭಾಷೆಯ ಸೌರ ಪಂಚಾಂಗವನ್ನು ಅತ್ಯಂತ ಶ್ರದ್ಧೆಯಿಂದ ಅನೇಕ ವರ್ಷಗಳಿಂದ ರಚಿಸಿ ಪ್ರಕಟಿಸುತ್ತಿದ್ದರು.

ಸಂಪ್ರದಾಯ ಸದಾಚಾರ ನಿಷ್ಠರೂ ಅಪಾರ ದೈವಭಕ್ತರೂ ಆಗಿದ್ದ ಅವರಿಗೆ ಮಂಗಳೂರು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಸಹಿತ ಅನೇಕ ಮಠಾಧೀಶರು ಸಂಘ ಸಂಸ್ಥೆಗಳಿಂದ ಗೌರವ ಪುರಸ್ಕಾರಗಳು ಸಂದಿವೆ. ಇವರು ಐವರು ಪುತ್ರರು, ಆರು ಪುತ್ರಿಯರು ಹಾಗೂ ಬಂಧುವರ್ಗವನ್ನು ಅಗಲಿದ್ದಾರೆ.