ಉಡುಪಿ : ಮೀನುಗಾರಿಕೆಗೆ ತೆರಳಿದ್ದ ಬೋಟ್ ಮುಳುಗಡೆಯಾಗಿರುವ ಘಟನೆ ಜಿಲ್ಲೆಯ ಮಲ್ಪೆಯಲ್ಲಿ ನಡೆದಿದೆ. ರೇಷ್ಮಾ ಖಾರ್ವಿ ಎಂಬುವವರಿಗೆ ಸೇರಿದ ಶ್ರೀ ಸ್ವರ್ಣರಾಜ್ ಆಲ ಸಮುದ್ರ ಬೋಟ್ ಮೇ 14ರಂದು ಮಲ್ಪೆಯಿಂದ ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ್ದು, ಬಳಿಕ ಮೇ 19ರಂದು ಮೀನುಗಾರಿಕೆ ಮುಗಿಸಿ ವಾಪಸ್ಸಾಗುತ್ತಿದ್ದ ವೇಳೆ ಮಲ್ಪೆ ಬಂದರು ಸಮೀಪ ಬೋಟ್‍ನ ಸ್ಟೇರಿಂಗ್ ಕಟ್ ಆಗಿ ಬಂಡೆಗೆ ಡಿಕ್ಕಿ ಹೊಡೆದು ಬೋಟ್ ಮುಳುಗಡೆಯಾಗಿದ್ದು, ಕೂಡಲೇ ಇದನ್ನು ಗಮನಿಸಿದ ಪಕ್ಕದಲ್ಲಿದ್ದ ಇನ್ನೊಂದು ದೋಣಿಯಲ್ಲಿ ಇದ್ದವರು ಬೋಟ್‍ನಲ್ಲಿದ್ದ 6 ಮಂದಿ ಮೀನುಗಾರರನ್ನು ರಕ್ಷಣೆ ಮಾಡಿದ್ದು, ಸುಮಾರು 5 ಲಕ್ಷ ಮೌಲ್ಯದ ಮೀನು, ಬಲೆ ಹಾಗೂ ಡೀಸೆಲ್ ಸಮುದ್ರ ಪಾಲಾಗಿದ್ದು, ಇದರಿಂದ ಸುಮಾರು 80 ಲಕ್ಷ ರೂ. ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ. ಈ ಕುರಿತು ಕರಾವಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.










