ಉಡುಪಿ : ಯೋಗಿಶ್ ಕೊಲೆ ಪ್ರಕರಣ – ನಾಲ್ವರು ಆರೋಪಿಗಳ ಬಂಧನ…

152
firstsuddi

ಉಡುಪಿ: ಲಕ್ಷ್ಮೀನಗರದಲ್ಲಿ ಸೋಮವಾರ ತಡ ರಾತ್ರಿ ನಡೆದ ಯುವಕ ಯೋಗಿಶ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲ್ಪೆ ಪೊಲೀಸರು ನಾಲ್ಕು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಸುಜಿತ್ ಪಿಂಟೊ,ರೊಹೀತ್ ಪಿಂಟೊ, ಅನ್ನು ಯಾನೆ ಪ್ರದೀಪ ಮತ್ತು ವಿನಯ್ ಎಂದು ಗುರುತಿಸಲಾಗಿದೆ. ಸೋಮವಾರ ರಾತ್ರಿ ಕ್ಷುಲ್ಲಕ ಕಾರಣಕ್ಕಾಗಿ ಯೋಗಿಶ್ ಮತ್ತು ಆರೋಪಿಗಳೊಂದಿಗೆ ಮಾತಿನ ಚಕಮಕಿ ನಡೆದಿದ್ದು, ಗಲಾಟೆ ತಾರಕಕ್ಕೇರಿ ಆರೋಪಿಗಳು ಯೋಗೀಶ್ ನನ್ನು ಹತ್ಯೆಗೈದು ಪರಾರಿಯಾಗಿದ್ದರು. ಘಟನೆಯ ಬಗ್ಗೆ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಜಿಲ್ಲಾ ಎಸ್ ಪಿ ಎನ್ ವಿಷ್ಣುವರ್ಧನ್, ಹೆಚ್ಚುವರಿ ಎಸ್ಪಿ ಕುಮಾರಚಂದ್ರ ಉಡುಪಿ ಡಿವೈಎಸ್ಪಿ ಜೈಶಂಕರ್ ಅವರ ಮಾರ್ಗದರ್ಶನದಲ್ಲಿ ಉಡುಪಿ ಸಿಪಿಐ ಮಂಜುನಾಥ್, ಮಲ್ಪೆ ಪಿಎಸ್ ಐ ತಿಮ್ಮೇಶ್ ಮತ್ತು ಉಡುಪಿ ಪಿಎಸ್ ಐ ಸಕ್ತೀವೇಲು ಮತ್ತವರ ತಂಡ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಇದೇ ವೇಳೆ ಕೃತ್ಯಕ್ಕೆ ಬಳಸಿದ ಕಾರು ಸಹ ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ.