ಉಡುಪಿ : ಶಾರ್ಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಡ ಸಂಭವಿಸಿ ಎರಡು ಅಂಗಡಿ ಸಂಪೂರ್ಣ ಸುಟ್ಟು ಭಸ್ಮ…

131
firstsuddi

ಉಡುಪಿ: ಎರಡು ಅಂಗಡಿಗಳಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ ಸಂಪೂರ್ಣ ಸುಟ್ಟು ಭಸ್ಮವಾಗಿರುವ ಘಟನೆ ನಗರದ ಸರ್ವಿಸ್ ಬಸ್ ನಿಲ್ದಾಣದಲ್ಲಿನ ನಗರಸಭಾ ಕಟ್ಟಡದಲ್ಲಿ ನಡೆದಿದೆ. ರಘುನಾಥ್ ರಾವ್ ಎಂಬವರಿಗೆ ಸೇರಿದ ಮಲ್ಲಿಕಾರ್ಜುನ ಸ್ಟೋರ್ಸ್ ಮತ್ತು ಮೊಬೈಲ್ ಕೇರ್ ಎಂಬ ಅಂಗಡಿಯಲ್ಲಿ ಇಂದು ಮುಂಜಾನೆ ಆಕಸ್ಮಿಕವಾಗಿ ಅಗ್ನಿ ಅನಾಹುತ ಸಂಭವಿಸಿದ್ದು, ಘಟನೆಯಿಂದ ಅಂಗಡಿಗಳಲ್ಲಿರುವ ವಸ್ತುಗಳು ಸಂಪೂರ್ಣ ಸುಟ್ಟು ಕರಕಲಾಗಿವೆ. ಘಟನೆಯಿಂದ ಸುಮಾರು 3.5 ಲಕ್ಷಕ್ಕೂ ಅಧಿಕ ಮೌಲ್ಯದ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ ಎನ್ನಲಾಗಿದೆ. ಘಟನೆಗೆ ಶಾರ್ಟ್ ಸರ್ಕ್ಯೂಟ್ ಕಾರಣವಾಗಿದ್ದು ಅಗ್ನಿಶಾಮಕ ದಳ ಬೆಂಕಿ ನಂದಿಸಲು ಸಹಕರಿಸಿದೆ. ಸ್ಥಳಕ್ಕೆ ನಗರಸಭಾ ಸದಸ್ಯ ಟಿ ಜಿ ಹೆಗ್ಡೆ, ಉದ್ಯಮಿ ಉದ್ಯಮಿ ಉದಯ್ ಕುಮಾರ್ ಶೆಟ್ಟಿ ಹಾಗೂ ಇತರರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.