ಉಡುಪಿ ಕೃಷ್ಣ ಮಠ, ಕೊಲ್ಲೂರಿಗೆ ಭೇಟಿ ನೀಡಿದ ನಿರ್ಮಲಾ ಸೀತಾರಾಮನ್.

55
firstsuddi

ಉಡುಪಿ : ಮೂರು ದಿನಗಳ ರಾಜ್ಯ ಪ್ರವಾಸ ಕೈಗೊಂಡಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು, ಇಂದು ಉಡುಪಿ ಕೃಷ್ಣ ಮಠ ಮತ್ತು ಕೊಲ್ಲೂರು ಮೂಕಾಂಬಿಕೆ ದೇವಾಲಯಕ್ಕೆ ಭೇಟಿ ನೀಡಿ ದರ್ಶನ ಪಡೆದರು. ಕೃಷ್ಣ ದರ್ಶನ ಬಳಿಕ ನಿರ್ಮಲಾ ಸೀತಾರಾಮನ್ ಅವರು ಪರ್ಯಾಯ ವಿದ್ಯಾಸಾಗರ ತೀರ್ಥ ಶ್ರೀಗಳಿಂದ ಗೌರವ ಸ್ವೀಕರಿಸಿದರು.

ಕೃಷ್ಣಮಠ ಭೇಟಿ ಬಳಿಕ ಕೊಲ್ಲೂರು ಮೂಕಾಂಬಿಕಾ ದೇವಳಕ್ಕೆ ಭೇಟಿ ನೀಡಿದ ಸಚಿವೆ ನಿರ್ಮಲಾ ಸೀತಾರಾಮನ್, ವಿಶೇಷ ಪೂಜೆಯಲ್ಲಿ ಭಾಗಿಯಾಗಿದರು. ದೇವಳದ ಮಂಡಳಿ ನಿರ್ಮಲಾ ಸೀತಾರಾಮನ್ ಅವರನ್ನು ಪೂರ್ಣಕುಂಭ ಗೌರವದಿಂದ ಸ್ವಾಗತ ಮಾಡಿಕೊಂಡಿತು. ನಿರ್ಮಲಾ ಸೀತಾರಾಮನ್ ಗೆ ಅವರಿಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸಾಥ್ ನೀಡಿದರು. ಇಂದು ಸಂಜೆ ನಿರ್ಮಲಾ ಸೀತಾರಾಮನ್ ಮಂಗಳೂರಿನಿಂದ ಬೆಂಗಳೂರಿಗೆ ಆಗಮಿಸಲಿದ್ದಾರೆ.