ಉಡುಪಿ : ಕಾಪು ಲೈಟ್ ಹೌಸ್ ಗಿಂತ 15 ಕಿ.ಮೀ ದೂರದಲ್ಲಿ ಬಂಡೆಗೆ ಸಿಲುಕಿ ಅಪಘಾತಕ್ಕೀಡಾದ ಕೋರಮಂಡಲ ಎಕ್ಸ್ ಪ್ರೆಸ್ ವೆಸೆಲ್ ಟಗ್ ನಲ್ಲಿ ಸಿಲುಕಿಕೊಂಡಿದ್ದ ಎಂಆರ್ ಪಿಎಲ್ ನ 9 ಮಂದಿ ಸಿಬ್ಬಂದಿಗಳನ್ನು ರಕ್ಷಿಸಲಾಗಿದೆ.
ಎನ್ ಎಂಪಿಟಿ ಬಂದರಿನ ಹೊರವಲಯದ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ಚಂಡಮಾರುತದ ಪರಿಣಾಮ ಆಯಂಕರ್ ತುಂಡಾಗಿ ತೇಲಿ ಬಂದು, ಕಾಪು ಬಳಿಯಲ್ಲಿ ಅಪಘಾತಕ್ಕೊಳಗಾದ ಕೋರಮಂಡಲ ಎಕ್ಸ್ ಪ್ರೆಸ್ ವೆಸೆಲ್ ಟಗ್ ನಲ್ಲಿ ಒಂಬತ್ತು ಮಂದಿ ಸಿಬ್ಬಂದಿಗಳಿದ್ದರು. ಇದೀಗ ನೌಕಾಪಡೆಯ ಹೆಲಿಕಾಪ್ಟರ್ ಮೂಲಕ 9 ಮಂದಿಯನ್ನು ರಕ್ಷಿಸಲಾಗಿದೆ.










