ಉಡುಪಿ : ಮಕ್ಕಳ ಅಶ್ಲೀಲ ವೀಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ ಲೋಡ್ ಮಾಡಿದ ವ್ಯಕ್ತಿಯ ವಿರುದ್ದ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮರವಂತೆಯ ಜಯರಾಮ ಎಂಬಾತ ಮೊಬೈಲ್ ಬಳಸಿ ನವೆಂಬೆರ್ 5ರಂದು ಹಲವಾರು ಬಾರಿ ಮಕ್ಕಳ ಅಶ್ಲೀಲ ವೀಡಿಯೋವನ್ನು ಆತನ ಇನ್ಸ್ಟಾಗ್ರಾಂ ನಲ್ಲಿ ಅಪ್ ಲೋಡ್ ಮಾಡುವ ಮೂಲಕ ಶಿಕ್ಷಾರ್ಹ ಅಪರಾಧವೆಸಗಿರುವುದು ಕಂಡು ಬಂದಿರುವುದರಿಂದ ರಾಮಚಂದ್ರ ನಾಯಕ್,ಪೊಲೀಸ್ ನಿರೀಕ್ಷಕರು, ಸೆನ್ ಅಪರಾಧ ಪೊಲೀಸ್ ಠಾಣೆ, ಉಡುಪಿ ಇವರು ಆತನ ವಿರುದ್ದ ಸೆನ್ ಅಪರಾಧ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.










