ಬೆಂಗಳೂರು : ನಟ, ರಾಜಕಾರಣಿ ಉಪೇಂದ್ರ ಅವರ ಪಕ್ಷಕ್ಕೆ ಚುನಾವಣಾ ಆಯೋಗ ಅಧಿಕೃತ ಚಿಹ್ನೆಯನ್ನು ನೀಡಿದೆ.
ಉತ್ತಮ ಪ್ರಜಾಕೀಯ ಪಕ್ಷಕ್ಕೆ ‘ಆಟೋ’ ಚಿಹ್ನೆಯನ್ನಾಗಿ ನೀಡಿದೆ. ಈ ಶುಭಸುದ್ದಿಯನ್ನು ನಟ ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ಉತ್ತಮ ಪ್ರಜಾಕೀಯ ಪಕ್ಷಕ್ಕೆ ಈ ಬಾರಿಯ 2023 ವಿಧಾನಸಭಾ ಚುನಾವಣೆಗೆ ಕಾಮನ್ ಸಿಂಬಲ್ “ಆಟೋ ರಿಕ್ಷಾ ” ಚಿಹ್ನೆ ಲಭಿಸಿದೆ. ಎಲ್ಲರಿಗೂ ಶುಭಾಶಯಗಳು ಎಂದು ಹೇಳಿದ್ದಾರೆ.
ಉಪೇಂದ್ರ ಅವರು ರಾಜಕಾರಣಕ್ಕೆ ಎಂಟ್ರಿ ಕೊಟ್ಟು ಹಲವು ವರ್ಷಗಳೇ ಕಳೆದಿವೆ. ಉತ್ತಮ ಪ್ರಜಾಕೀಯ ಪಾರ್ಟಿ ಹೆಸರಿನಲ್ಲಿ ಅವರು ಪಕ್ಷವೊಂದನ್ನು ಶುರು ಮಾಡಿ ಯುವಕರ ಮಧ್ಯೆ ಸಂಚಲನ ಮೂಡಿಸಿದ್ದಾರೆ. ಈ ಪಕ್ಷದಿಂದ ಪಂಚಾಯಿತಿ ಚುನಾವಣೆ ಎದುರಿಸಿದ್ದರು. ಪಂಚಾಯಿತಿ ಚುನಾವಣೆಯಲ್ಲಿ ಒಬ್ಬ ಸದಸ್ಯ ಕೂಡ ಗೆದ್ದಿದ್ದಾನೆ. ಆದರೆ ಅಧಿಕೃತವಾಗಿ ಈ ಪಾರ್ಟಿಗೆ ಚಿಹ್ನೆ ಇರಲಿಲ್ಲ. ಇದೀಗ ಕೇಂದ್ರ ಚುನಾವಣೆ ಆಯೋಗ ಪಕ್ಷಕ್ಕೆ ಚಿಹ್ನೆ ನೀಡಿದೆ.










