ಲಖನೌ(ಉತ್ತರಪ್ರದೇಶ) : ಉತ್ತರಪ್ರದೇಶ ವಿಧಾನಸಭೆಗೆ 6 ನೇ ಹಂತದ ಮತದಾನ ಆರಂಭವಾಗಿದೆ. 10 ಜಿಲ್ಲೆಗಳ 57 ವಿಧಾನಸಭಾ ಕ್ಷೇತ್ರಗಳಲ್ಲಿ ಚುನಾವಣೆ ನಡೆಯಲಿದೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಕಾಂಗ್ರೆಸ್ ನ ಅಜಯ್ ಕುಮಾರ್ ಲಲ್ಲು, ಸಮಾಜವಾದಿ ಪಕ್ಷದ ನಾಯಕ ಸ್ವಾಮಿ ಪ್ರಸಾದ್ ಮೌರ್ಯ ಸೇರಿದಂತೆ 676 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ.
ಸ್ವಾಮಿ ಪ್ರಸಾದ್ ಮೌರ್ಯ ಅವರು ಇತ್ತೀಚೆಗಷ್ಟೇ ಬಿಜೆಪಿ ತೊರೆದು ಸಮಾಜವಾದಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದರು. ಇನ್ನೂ ಗೋರಖ್ ಪುರದ ಲೋಕಸಭಾ ಕ್ಷೇತ್ರದ ಎಂಪಿಯಾಗಿದ್ದ ಯೋಗಿ ಆದಿತ್ಯನಾಥ್ ಇದೇ ಮೊದಲ ಬಾರಿಗೆ ವಿಧಾನಸಭೆ ಚುನಾವಣೆ ಎದುರಿಸುತ್ತಿದ್ದಾರೆ. ಮೊದಲು ಯೋಗಿ ಅಯೋಧ್ಯೆಯಿಂದ ಸ್ಪರ್ಧಿಸುವುದಾಗಿ ಹೇಳಲಾಗಿತ್ತು. ಆದರೆ ನಂತರ ಅವರು ತಮ್ಮ ತವರು ಜಿಲ್ಲೆ ಗೋರಖ್ಪುರ ವಿಧಾನಸಭಾ ಕ್ಷೇತ್ರದಿಂದಲೇ ಟಿಕೆಟ್ ಪಡೆದರು.










