ಉತ್ತರಾಖಂಡದ ಸುರಂಗದಲ್ಲಿ 17 ದಿನಗಳಿಂದ ಸಿಲುಕಿದ್ದ 41 ಕಾರ್ಮಿಕರ ರಕ್ಷಣೆ…

52
firstsuddi

ಡೆಹ್ರಾಡೂನ್: ಉತ್ತರಾಖಂಡದ ಉತ್ತರಕಾಶಿ ಸುರಂಗದಲ್ಲಿ 17 ದಿನಗಳಿಂದ ಸಿಲುಕಿದ್ದ 41ಕಾರ್ಮಿಕರನ್ನು ರಕ್ಷಣೆ ಮಾಡಲಾಗಿದೆ.

17 ದಿನ 400 ಗಂಟೆಗಳ ಆಪರೇಷನ್ ಯಶಸ್ವಿಯಾಗಿದ್ದು, ನಿನ್ನೆ ರಾತ್ರಿ ಒಬ್ಬೊಬ್ಬರಾಗಿ ಸುರಂಗದಿಂದ ಕಾರ್ಮಿಕರು ಹೊರ ಬರುತ್ತಿದ್ದಾರೆ. ನೆಲದಿಂದ ಸಮಾನಾಂತರವಾಗಿ ಮೊದಲು ಕೈಗೊಂಡಿದ್ದ ಕೊರೆವ ಕೆಲಸವನ್ನು, ಅದು ನಿಂತಿದ್ದ ಸ್ಥಳದಿಂದಲೇ ನಿಷೇಧಿತ ಇಲಿ ಬಿಲ ಗಣಿಗಾರಿಕೆಯ ತಂತ್ರಜ್ಞಾನ ಬಳಸಿ ಡ್ರಿಲ್ಲಿಂಗ್ ಮಾಡಿದ್ದಾರೆ. ಕೊರೆವ ಕಾರ್ಯ ಪೂರ್ಣಗೊಂಡ ಬಳಿಕ ಎನ್‌ಡಿಆರ್‌ಎಫ್ ಸಿಬ್ಬಂದಿ ಸುರಂಗದೊಳಗೆ ಹೋಗಿ, ಕಾರ್ಮಿಕರನ್ನು ಒಬ್ಬೊಬ್ಬರನ್ನಾಗಿ ಹೊರಗೆ ಕರೆತಂದಿದ್ದಾರೆ.

ಕಾರ್ಮಿಕರನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲು 41 ಅಂಬುಲೆನ್ಸ್, ಸ್ಟ್ರೆಚ್ಚರ್, ಮೆಡಿಕಲ್ ಎಮೆರ್ಜೆನ್ಸಿ ಇದ್ರೆ ಚಿನೂಕ್ ಹೆಲಿಕಾಪ್ಟರ್.. ಹೀಗೆ ಎಲ್ಲವನ್ನು ಸಜ್ಜಾಗಿ ಇರಿಸಲಾಗಿದೆ. ಸ್ಥಳದಲ್ಲೇ ಸಿಎಂ ಪುಷ್ಕರ್ ಸಿಂಗ್ ಧಾಮಿ, ಕೇಂದ್ರ ಸಚಿವ ವಿಕೆ ಸಿಂಗ್, ಕಾರ್ಮಿಕರು ಬಂಧುಗಳು ಸ್ಥಳದಲ್ಲೇ ಉಪಸ್ಥಿತರಿದ್ದರು.

ಉತ್ತರಕಾಶಿ ಜಿಲ್ಲೆಯ ಸಿಲ್‌ಕ್ಯಾರ ಹಾಗೂ ದಂಡಲ್‌ಗಾಂವ್‌ಗೆ ಸಂಪರ್ಕ ಕಲ್ಪಿಸಲು ಚಾರ್ ಧಾಮ್ ರಸ್ತೆ ಯೋಜನೆ ಅಡಿಯಲ್ಲಿ ಸುರಂಗ ಮಾರ್ಗ ನಿರ್ಮಿಸಲಾಗುತ್ತಿದೆ. 4.5 ಕಿಲೋ ಮೀಟರ್ ದೂರದ ಸುರಂಗ ನಿರ್ಮಾಣದ ವೇಳೆ ಸುಮಾರು 150 ಮೀಟರ್ ಉದ್ದದ ಸುರಂಗ ಕುಸಿದಿತ್ತು. ನವೆಂಬರ್ 12ರಂದು ಜಾವ 4 ಗಂಟೆ ಸುಮಾರಿಗೆ ಸುರಂಗ ಕುಸಿದಿದ್ದು, ಕೂಡಲೇ ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಗಿತ್ತು.