ಉತ್ತರಾಖಂಡ್ ಸಿಎಂ ತಿರಥ್ ಸಿಂಗ್ ರಾವತ್ ಅವರಿಗೆ ಕೋವಿಡ್-19 ಪಾಸಿಟಿವ್…

118
Firstsuddi

ಡೆಹ್ರಾಡೂನ್ : ಉತ್ತರಾಖಂಡದ ನೂತನ ಮುಖ್ಯಮಂತ್ರಿ ತಿರಥ್ ಸಿಂಗ್ ರಾವತ್ ಅವರಿಗೆ ಕೋವಿಡ್-19 ಸೋಂಕು ದೃಢಪಟ್ಟಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ತಿರಥ್ ಸಿಂಗ್ ಅವರು, ನನಗೆ ಕೊರೋನಾ ಪಾಸಿಟಿವ್ ಬಂದಿದೆ. ನಾನು ಆರೋಗ್ಯವಾಗಿದ್ದೇನೆ. ವೈದ್ಯರು ನನ್ನ ಆರೋಗ್ಯದ ಮೇಲೆ ನಿಗಾ ವಹಿಸುತ್ತಿದ್ದಾರೆ. ಯಾವುದೇ ಸಮಸ್ಯೆ ಇಲ್ಲ ಎಂದು ಹೇಳಿದ್ದಾರೆ.

ಕಳೆದ ಕೆಲವು ದಿನಗಳಿಂದ ನನ್ನೊಂದಿಗೆ ಸಂಪರ್ಕಕ್ಕೆ ಬಂದವರು ಎಚ್ಚರದಿಂದಿರಿ, ಪ್ರತಿಯೊಬ್ಬರೂ ಕೊರೊನಾ ಪರೀಕ್ಷೆಗೆ ಒಳಗಾಗಿ, ಎಲ್ಲರೂ ಆರೋಗ್ಯದಿಂದರಲಿ ಎಂದು ಸಿಎಂ ಮನವಿ ಮಾಡಿದ್ದಾರೆ.