ಉತ್ತರಾಖಂಡ್ ಹಿಮ ಸ್ಫೋಟ : ಚಮೋಲಿಯ ತಪೋವನದಲ್ಲಿ ಮುಂದುವರಿದ ರಕ್ಷಣಾ ಕಾರ್ಯಚರಣೆ…

126
First Suddi

ಚಮೋಲಿ : ಹಿಮನದಿ ಸ್ಫೋಟದ ಆರನೇ ದಿನವಾದ ಇಂದು ಕೂಡ ಚಮೋಲಿ ಜಿಲ್ಲೆಯ ತಪೋವನ ಸುರಂಗದಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.

ಹಿಮ ಕುಸಿತದಿಂದ ತೀವ್ರ ಪ್ರವಾಹ ಉಂಟಾಗಿ ಸಾಕಷ್ಟು ಸಾವು-ನೋವು ಸಂಭವಿಸಿತ್ತು. ಹಿಮನದಿ ಸ್ಫೋಟದಿಂದ ಹಾನಿಗೊಳಗಾದ ವಿವಿಧ ಪ್ರದೇಶಗಳಲ್ಲಿ ಈಗಾಗಲೇ 36 ಶವಗಳನ್ನು ಪತ್ತೆ ಮಾಡಲಾಗಿದೆ. ಇನ್ನೂ 204 ಜನರು ಕಣ್ಮರೆಯಾಗಿದ್ದು, ಇವರಿಗಾಗಿ ಶೋಧ ಕಾರ್ಯಾಚರಣೆ ಮುಂದುವರಿದಿದೆ .

ರಿಷಿಗಂಗಾ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾದ ಕಾರಣ ರಕ್ಷಣಾ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು. ಸುಮಾರು 30 ಜನ ಈ ಸುರಂಗದೊಳಗೆ ಅಪಾಯಕ್ಕೆ ಸಿಲುಕಿರುವ ಸಾಧ್ಯತೆ ಹಿನ್ನಲೆ ಇಂದು ಮತ್ತೆ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.

ನಮ್ಮ ಶೋಧ ತಂಡ ನಿರಂತರವಾಗಿ ನಾಪತ್ತೆಯಾದವರ ಬಗ್ಗೆ ಹುಡುಕಾಟ ನಡೆಸುತ್ತಿದ್ದಾರೆ. ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿರುವ ತಂಡ ನಿರಂತರವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಎನ್ ಡಿಆರ್ ಎಫ್ ನ ಕಮಾಂಡರ್ ಪಿ ಕೆ ತಿವಾರಿ ಅವರು ತಿಳಿಸಿದ್ದಾರೆ.

ಮತ್ತೆ ರಿಷಿಗಂಗಾ ನದಿಯಲ್ಲಿ ನೀರಿನ ಮಟ್ಟ ಹೆಚ್ಚಳವಾಗುತ್ತಿರುವ ಹಿನ್ನೆಲೆ ಈಗಾಗಲೇ ಪೊಲೀಸರು ನದಿ ಸುತ್ತಮುತ್ತಲಿನ ಜನರಿಗೆ ಎಚ್ಚರಿಕೆಯನ್ನು ನೀಡಿದ್ದಾರೆ.