ಉತ್ತರ ಕನ್ನಡ: ಮಂಗನ ಕಾಯಿಲೆಗೆ 2ನೇ ಬಲಿ…

51
firstsuddi

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮಂಗನ ಕಾಯಿಲೆಗೆ 2ನೇ ಬಲಿಯಾಗಿದೆ. ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕೊರ್ಲಕೈ ಗ್ರಾಮದ 60 ವರ್ಷದ ವೃದ್ಧೆ ಮಂಗನ ಕಾಯಿಲೆಗೆ ಬಲಿಯಾಗಿದ್ದಾರೆ.

20 ದಿನದಿಂದ ಮಂಗನ ಕಾಯಿಲೆಯಿಂದ ಬಳಲುತ್ತಿದ್ದ ವೃದ್ಧೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೇ ನಿನ್ನೆ ರಾತ್ರಿ ಕೊನೆಯುಸಿರೆಳೆದಿದ್ದಾರೆ. ಸಿದ್ದಾಪುರ ತಾಲ್ಲೂಕಿನಲ್ಲಿಯೇ ಮಂಗನ ಕಾಯಿಲೆ ಪ್ರಕರಣಗಳ ಸಂಖ್ಯೆ 43ಕ್ಕೆ ಏರಿಕೆಯಾಗಿದೆ.

103 ಸಕ್ರಿಯ ಮಂಗನ ಕಾಯಿಲೆ ಪ್ರಕರಣಗಳನ್ನು ಹೊಂದಿರುವ ರಾಜ್ಯದಲ್ಲಿ ಇದುವರೆಗೆ ಮೂವರು ಸಾವಿಗೀಡಾಗಿದ್ದಾರೆ. ಚಿಕ್ಕಮಗಳೂರು, ಉತ್ತರ ಕನ್ನಡ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ತಲಾ ಒಬ್ಬರು ರೋಗದಿಂದ ಮೃತಪಟ್ಟಿದ್ದಾರೆ.