ಉತ್ತರ ಕರ್ನಾಟಕದ ಪ್ರವಾಹವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಬೇಕು : ರಮೇಶ್ ಜಾರಕಿಹೊಳಿ…

213
firstsuddi

ಬೆಳಗಾವಿ : ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ಅವರು ತಮ್ಮ ಗೋಕಾಕ್ ಕ್ಷೇತ್ರದ ವಿವಿಧ ಪ್ರವಾಹ ಪೀಡಿತ ಹಳ್ಳಿಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ರಮೇಶ್ ಜಾರಕಿಹೊಳಿ ಅವರು, ನಾನು ಎಂದಿಗೂ ಈ ರೀತಿಯ ಪ್ರವಾಹವನ್ನು ಕಂಡಿರಲಿಲ್ಲ. ಎಲ್ಲಾ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಯಾವ ಭಾಗದಲ್ಲಿ ಎಷ್ಟು ನಷ್ಟವಾಗಿದೆ ಹಾಗೂ ಎಷ್ಟು ಮನೆಗಳು ಕುಸಿದು ಬಿದ್ದಿದೆ ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿಯುತ್ತೇನೆ. ಬಳಿಕ ಅದನ್ನು ರಾಜ್ಯ ಸರ್ಕಾರಕ್ಕೆ ನೀಡಿ ಸಂತ್ರಸ್ತರಿಗೆ ಸೂಕ್ತ ಪರಿಹಾರ ನೀಡುವಂತೆ ಒತ್ತಾಯಿಸುತ್ತೇನೆ. ಅಲ್ಲದೇ ಉತ್ತರ ಕರ್ನಾಟಕದ ಪ್ರವಾಹವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಬೇಕು ಎಂದರು.