ಮಂಗಳೂರು: ಹವ್ಯಾಸಿ ಯಕ್ಷಗಾನ ಕಲಾವಿದನಾಗಿರುವ ಪ್ರವಿತ್ ಆಚಾರ್ಯ, ಸಸಿಹಿತ್ಲು ಯಕ್ಷಗಾನ ಮೇಳದಲ್ಲಿ ಸ್ತ್ರೀವೇಷಧಾರಿಯಾಗಿ ಯಕ್ಷಗಾನ ಕಲಾಸಕ್ತರ ಗಮನ ಸೆಳೆಯುತ್ತಿದ್ದರು. ಉದಯೋನ್ಮುಖ ಯಕ್ಷಗಾನ ಕಲಾವಿದ, ಎಂಎಸ್‍ಡಬ್ಲ್ಯು ವಿದ್ಯಾರ್ಥಿ ಪ್ರವಿತ್ ಆಚಾರ್ಯ ಎಂಬವರು ನಗರದ ಹೊರವಲಯದ ಅರ್ಕುಳದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆ ಸಮೀಪದ ಮೇಲಂತಬೆಟ್ಟು ಮುಂಡೂರು ನಿವಾಸಿ ಶೇಖರ ಆಚಾರ್ಯರ ಪುತ್ರನಾದ ಪ್ರವಿತ್ ಆಚಾರ್ಯ ಬಂಟ್ವಾಳ ತಾಲೂಕಿನ ವಿಟ್ಲದ ಸರ್ಕಾರಿ ಕಾಲೇಜಿನಲ್ಲಿ ಪ್ರಥಮ ವರ್ಷದ ಎಂಎಸ್‍ಡಬ್ಲ್ಯು ವಿದ್ಯಾರ್ಥಿ. ಓದುವ ಸಲುವಾಗಿ ಮಂಗಳೂರಿನ ಸಮೀಪ ತನ್ನ ಸಂಬಂಧಿಕರ ಮನೆಯಲ್ಲಿ ವಾಸವಿದ್ದ ಎಂದು ತಿಳಿಸಿದರು. ಅವರು ಬಿ.ಸಿ. ರೋಡ್‍ನಲ್ಲಿ ದ್ವಿಚಕ್ರ ವಾಹನ ನಿಲ್ಲಿಸಿ ವಿಟ್ಲಕ್ಕೆ ಕಾಲೇಜಿಗೆ ಹೋಗುತ್ತಿದ್ದರು. ಎಂದಿನಂತೆ ಮಂಗಳವಾರ ಪ್ರವಿತ್ ಆಚಾರ್ಯ ಪಡೀಲ್ ಸಂಜೆ ಕಾಲೇಜು ಮುಗಿದ ಬಳಿಕ ಬೈಕ್ ಹತ್ತಿ ಮಂಗಳೂರಿನ ಕಡೆ ಹೋಗುತ್ತಿದರು. ಅರ್ಕುಳಕ್ಕೆ ಬರುತ್ತಿದ್ದಂತೆ ಬೈಕ್ ಡಿವೈಡರ್‍ಗೆ ಡಿಕ್ಕಿ ಹೊಡೆದು ಅವರು ರಸ್ತೆಗೆ ಬಿದ್ದಿದ್ದಾರೆ. ಅದೇ ವೇಳೆ ಹಿಂಭಾಗದಿಂದ ಬರುತ್ತಿದ್ದ ಐಸ್‍ಕ್ರೀಂ ಸಾಗಣೆಯ ವಾಹನ ಪ್ರವಿತ್ ಆಚಾರ್ಯ ಪಡೀಲ್ ತಲೆಯ ಮೇಲೆ ಹರಿದ ಪರಿಣಾಮ ಅವರು ಸ್ಥಳದಲ್ಲಿಯೇ ಸಾಮನ್ನಪ್ಪಿದ್ದಾರೆ.










