ಉದ್ಘಾಟನೆಯಾದ ಎರಡೇ ದಿನಕ್ಕೆ ಕಿತ್ತು ಹೋಯ್ತು ಮಲ್ಪೆಯ ತೇಲುವ ಸೇತುವೆ…

75
firstsuddi

ಉಡುಪಿ : ಮಲ್ಪೆ ಬೀಚ್ ನಲ್ಲಿ ಪ್ರವಾಸಿಗರನ್ನು ಆಕರ್ಷಿಸಲು ತೇಲುವ ಸೇತುವೆ ನಿರ್ಮಾಣವಾಗಿತ್ತು. ಇದು ಕರ್ನಾಟಕ ರಾಜ್ಯದಲ್ಲೇ ಪ್ರಥಮ ತೇಲುವ ಸೇತುವೆ ಎಂಬ ಹೆಗ್ಗಳಿಕೆಗೂ ಪಾತ್ರವಾಗಿತ್ತು. ಆದರೀಗ ಈ ತೇಲುವ ಸೇತುವೆ ಉದ್ಘಾಟನೆಯಾದ ಎರಡೇ ದಿನಕ್ಕೆ ಕಿತ್ತುಕೊಂಡು ಬಂದಿದೆ. ಸದ್ಯ ಇದರ ವಿಡಿಯೋಗಳೂ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.

ನಿನ್ನೆ ಸಂಜೆಯಿಂದ ಸಮುದ್ರದ ಅಲೆಗಳ ಅಬ್ಬರ ಜೋರಾಗಿದ್ದರಿಂದ ಸೇತುವೆಯಲ್ಲಿ ತಾಂತ್ರಿಕ ದೋಷ ಕಂಡುಬಂದ ಹಿನ್ನಲೆ ನಿರ್ವಹಣೆಯ ದೃಷ್ಟಿಯಿಂದ ತೇಲುವ ಸೇತುವೆ ಕಾರ್ಯ ಸ್ಥಗಿತಗೊಳಿಸಲಾಗಿದೆ ಎಂದು ನಿರ್ವಾಹಕರು ಮಾಹಿತಿ ನೀಡಿದ್ದಾರೆ. ಹೀಗಾಗಿ ತೇಲುವ ಸೇತುವೆ ಬಳಿ ಪ್ರವಾಸಿಗರ ಪ್ರವೇಶ ಬಂದ್ ಮಾಡಲಾಗಿದೆ. ನಿನ್ನೆ ಸಂಜೆಯಿಂದಲೇ ತೇಲುವ ಸೇತುವೆ ಬಂದ್ ಆಗಿದೆ ಎಂದು ತಿಳಿದು ಬಂದಿದೆ.

ಕಳೆದ ಶುಕ್ರವಾರವಷ್ಟೆ ಮಲ್ಪೆ ಬೀಚ್ ನಲ್ಲಿ ನಿರ್ಮಾಣವಾಗಿದ್ದ ತೇಲುವ ಸೇತುವೆಯನ್ನು ಶಾಸಕ ರಘುಪತಿ ಭಟ್ ಉದ್ಘಾಟಿಸಿದ್ದರು. 100 ಮೀಟರ್ ಉದ್ದ ಮತ್ತು 3.5 ಮೀಟರ್ ಅಗಲವಿರುವ ತೇಲುವ ಸೇತುವೆ ಇದಾಗಿದೆ. ಹೆಚ್ಚಿನ ಸಾಂದ್ರತೆಯ ಫೋಂಟೋನ್ಸ್ ಬ್ಲಾಕ್ ಗಳಿಂದ ಇದನ್ನು ಮಾಡಲಾಗಿದ್ದು, ಇದರಲ್ಲಿ ಒಂದು ಬಾರಿಗೆ ನೂರು ಜನರು ಸಾಗಬಹುದಿತ್ತು.