ಉದ್ಯಮಿ ಆತ್ಮಹತ್ಯೆ ಪ್ರಕರಣ – ಶಾಸಕ ಲಿಂಬಾವಳಿ ಸೇರಿ 6 ಜನರ ವಿರುದ್ಧ ಎಫ್ಐಆರ್…

49
firstsuddi

ರಾಮನಗರ: ಉದ್ಯಮಿ ಪ್ರದೀಪ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಅರವಿಂದ ಲಿಂಬಾವಳಿ ಸೇರಿದಂತೆ ಒಟ್ಟು 6 ಜನರ ವಿರುದ್ಧ ಪೊಲೀಸರು ಎಫ್ ಐಆರ್ ದಾಖಲಿಸಿಕೊಂಡಿದ್ದಾರೆ.

ಹೊಸ ವರ್ಷಾಚರಣೆ ಸಲುವಾಗಿ ಕುಟುಂಬ ಸಮೇತ ರಾಮನಗರದ ಕಗ್ಗಲೀಪುರ ಸಮೀಪವಿರುವ ನೆಟ್ಟಗೆರೆ ಬಳಿ ಇರುವ ರೆಸಾರ್ಟ್ ಗೆ ಬಂದಿದ್ದ ಪ್ರದೀಪ್ ರಾತ್ರಿ ಪಾರ್ಟಿ ಮಾಡಿ, ಬೆಳಗ್ಗೆ ಶಿರಾಗೆ ಹೋಗಬೇಕು ಎಂದು ಹೇಳಿ ರೆಸಾರ್ಟ್ ನಿಂದ ನಿನ್ನೆ ಬೆಳಗ್ಗೆ ಒಬ್ಬರೇ ಬೆಂಗಳೂರಿನಲ್ಲಿನ ತಮ್ಮ ನಿವಾಸಕ್ಕೆ ಹೋಗಿ ಡೆತ್ ನೋಟ್ ಬರೆದಿದ್ದಾರೆ. ಬಳಿಕ ರೆಸಾರ್ಟ್ ಗೆ ವಾಪಸ್ ಬರುವಾಗ ಕಾರಿನಲ್ಲೇ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಡೆತ್ ನೋಟ್ ನಲ್ಲಿ ಅರವಿಂದ ಲಿಂಬಾವಳಿ, ಗೋಪಿ, ರಘುವ ಭಟ್, ಸೋಮಯ್ಯ, ರಮೇಶ್ ರೆಡ್ಡಿ ಹಾಗೂ ಜಯರಾಮ್ ಎಂದು ಹೆಸರು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದೀಗ ಮೃತ ಉದ್ಯಮಿ ಪತ್ನಿ ನಮಿತಾ ದೂರಿನನ್ವಯ ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ ಈ 6 ಜನರ ವಿರುದ್ಧ ಎಫ್ಐಆರ್ ದಾಖಲಾಗಿದೆ.