ಉನ್ನಾವೋ ಅತ್ಯಾಚಾರ ಪ್ರಕರಣ-ಆರೋಪಿ ಕುಲದೀಪ್ ಸಿಂಗ್ ಸೇಂಗರ್ ಗೆ ಜೀವಿತಾವಧಿ ಶಿಕ್ಷೆ…

252
firstsuddi

ನವದೆಹಲಿ : ಇಡೀ ದೇಶವನ್ನೇ ನಿಬ್ಬೆರಗಾಗಿಸಿದ್ದ ಉನ್ನಾವೋ ಅತ್ಯಾಚಾರ ಹಾಗೂ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯ ತೀಸ್ ಹಜಾರಿ ಕೋರ್ಟ್ ಕುಲದೀಪ್ ಸಿಂಗ್ ಅವರ ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಿದ್ದು, ಉನ್ನಾವೋ ಅತ್ಯಾಚಾರ ಪ್ರಕರಣದ ಆರೋಪಿ ಹಾಗೂ ಬಿಜೆಪಿಯ ಉಚ್ಛಾಟಿತ ಶಾಸಕ ಕುಲದೀಪ್ ಸಿಂಗ್ ಸೇಂಗರ್ ಅವರಿಗೆ ಜೀವಿತಾವಧಿ ಶಿಕ್ಷೆಯನ್ನು ವಿಧಿಸಿ ಕೋರ್ಟ್ ಆದೇಶ ಹೊರಡಿಸಿದೆ. ಅಲ್ಲದೇ ಜೀವಿತಾವಧಿ ಶಿಕ್ಷೆಯೊಂದಿಗೆ 25ಲಕ್ಷ ರೂ ದಂಡ ಹಾಗೂ ಸಂತ್ರಸ್ಥೆ ಕುಟುಂಬಕ್ಕೆ 10ಲಕ್ಷ ರೂ ಹಣವನ್ನು ನೀಡಬೇಕೆಂದು ಕೋರ್ಟ್ ತೀರ್ಪು ಪ್ರಕಟಿಸಿದೆ. ಡಿ. 5ರಂದು ಯುವತಿ ತನಗಾದ ಅನ್ಯಾಯದ ವಿರುದ್ಧ ನ್ಯಾಯಾಲಯದಲ್ಲಿ ಸಾಕ್ಷಿ ಹೇಳಲು ತೆರಳುತ್ತಿದ್ದ ವೇಳೆ ಜಾಮೀನಿನ ಮೇಲೆ ಹೊರಬಂದಿದ್ದ ಆರೋಪಿಗಳು ಸಂತ್ರಸ್ಥೆಯ ಮೇಲೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದ್ದರು. ಬಳಿಕ ಯುವತಿ ಸಾವು ಬದುಕಿನ ನಡುವೆ ಹೋರಾಟ ನಡೆಸಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು.