ಉನ್ನಾವೋ ಅತ್ಯಾಚಾರ ಪ್ರಕರಣ-ಬಿಜೆಪಿ ಹುಚ್ಚಾಟಿತ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ಅಪರಾಧಿ-ದೆಹಲಿ ಕೋರ್ಟ್ ತೀರ್ಪು…

250
firstsuddi

ನವದೆಹಲಿ : 2017ರ ಜೂನ್ 4ರಂದು ನಡೆದ ಉನ್ನಾವೋ ಅಪ್ರಾಪ್ತೆಯ ಅಪಹರಣ ಹಾಗೂ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಹುಚ್ಚಾಟಿತ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ಅಪರಾಧಿ ಎಂದು ದೆಹಲಿಯ ತೀಸ್ ಹಜಾರಿ ಕೋರ್ಟ್ ತೀರ್ಪು ಪ್ರಕಟಿಸಿದೆ. ಕುಲದೀಪ್ ಸಿಂಗ್ ಅವರು ಯುವತಿಯನ್ನು ಅಪಹರಿಸಿ ಅತ್ಯಾಚಾರ ಎಸಗಿರುವುದು ಸಾಭೀತಾಗಿದ್ದು, ಆರೋಪಿಗೆ ಡಿ.19ರಂದು ನ್ಯಾಯಾಲಯ ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಲಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ಥೆ ನ್ಯಾಯಾಲಯಕ್ಕೆ ಹಾಜರಾಗಲು ತೆರಳುತ್ತಿದ್ದ ಕಾರಿಗೆ ಅಪಘಾತ ಮಾಡಿ ಹತ್ಯೆ ಮಾಡಲು ಸಂಚು ರೂಪಿಸಿದ ಆರೋಪ ಕುಲದೀಪ್ ಸಿಂಗ್ ಮೇಲಿತ್ತು. ಅಲ್ಲದೇ ಡಿ.5ರಂದು ಸಂತ್ರಸ್ಥೆ ನ್ಯಾಯಾಲಯಕ್ಕೆ ಸಾಕ್ಷಿ ಹೇಳಲು ತೆರಳುತ್ತಿದ್ದ ವೇಳೆ ಜಾಮೀನಿನ ಮೇಲೆ ಹೊರಬಂದಿದ್ದ ಪ್ರಕರಣದ ಆರೋಪಿಗಳು ಯುವತಿಯ ಮೇಲೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದ್ದರು. ಬಳಿಕ ಯುವತಿ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ಈ ಕುರಿತು ವಿಚಾರಣೆ ನಡೆಸಿದ ಕೋರ್ಟ್ ಡಿ.16ಕ್ಕೆ ತೀರ್ಪು ಕಾಯ್ದಿರಿಸಿತ್ತು. ಅದರಂತೆ ಇಂದು ತೀರ್ಪು ಪ್ರಕಟವಾಗಿದ್ದು, ಕುಲದೀಪ್ ಸಿಂಗ್ ಸೆಂಗಾರ್ ಅಪರಾಧಿ ಎಂದು ಆದೇಶ ಹೊರಡಿಸಿದೆ.