ಉಪಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಗೆಲ್ಲದಿದ್ದರೆ ಸಿಎಂ ರಾಜೀನಾಮೆ ನೀಡಲೇಬೇಕು : ಸಿದ್ದರಾಮಯ್ಯ ಒತ್ತಾಯ…

202
firstsuddi

ಹುಬ್ಬಳ್ಳಿ : ಉಪಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಗೆಲ್ಲದಿದ್ದರೆ ಸಿಎಂ ರಾಜೀನಾಮೆ ಕೊಡಲೇಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಒತ್ತಾಯಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಈಗಾಗಲೇ ಒಟ್ಟು 5 ಕ್ಷೇತ್ರಗಳಲ್ಲಿ ಪ್ರಚಾರ ನಡೆಸಿದ್ದೇನೆ. ಉಳಿದ ಎಲ್ಲಾ ಕ್ಷೇತ್ರಗಳಲ್ಲೂ ಪ್ರಚಾರ ನಡೆಸುತ್ತೇನೆ. ಉಪಚುನಾವಣೆಯ ಬಳಿಕ ರಾಜಕೀಯದಲ್ಲಿ ಬದಲಾವಣೆ ಅಗುತ್ತದೆ. ಒಂದು ವೇಳೆ ಬಿಜೆಪಿ 8 ಸ್ಥಾನಗಳಲ್ಲಿ ಗೆಲ್ಲದಿದ್ದರೆ ಸಿಎಂ ರಾಜೀನಾಮೆ ಕೊಡಲೇಬೇಕು. 17 ಜನ ಶಾಸಕರಿಗೆ ರಾಜೀನಾಮೆ ಕೊಡಿಸಿ ಕುದುರೆ ವ್ಯಾಪಾರವನ್ನು ಮಾಡಿದ್ದಾರೆ. ಜೆಡಿಎಸ್ ಪಕ್ಷ ಬಿಜೆಪಿಗೆ ಬೆಂಬಲ ನೀಡುವುದಿಲ್ಲ ಎಂದು ನನಗೆ ನಂಬಿಕೆ ಇದೆ. ಬಿ.ಎಸ್. ಯಡಿಯೂರಪ್ಪ ಅವರು ಗೊಂದಲದಲ್ಲಿದ್ದಾರೆ ಹೀಗಾಗಿ ಏನೇನೋ ಹೇಳಿಕೆ ನೀಡುತ್ತಿದ್ದಾರೆ ಎಂದರು. ಇದೇ ವೇಳೆ ಮಹಾರಾಷ್ಟ್ರ ರಾಜಕಾರಣದ ಕುರಿತು ಮಾತನಾಡಿದ ಅವರು, ಮಹಾರಾಷ್ಟ್ರದಲ್ಲಿ ಪ್ರಜಾಪ್ರಭುತ್ವ ಕಗ್ಗೊಲೆಯಾಗಿದೆ. ರಾತ್ರೋರಾತ್ರಿ ರಾಷ್ಟ್ರಪತಿ ಆಳ್ವಿಕೆಯನ್ನು ವಾಪಾಸ್ ತೆಗೆದುಕೊಂಡು ಬೆಳಗಾಗುವುದರೊಳಗೆ ಬಿಜೆಪಿಯವರು ಬಹುಮತ ಇಲ್ಲದ ಸರ್ಕಾರ ರಚನೆ ಮಾಡಿದ್ದಾರೆ ಎಂದರು.