ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಟ್ಟಹಾಸದ ನಡುವೆ ಇಂದು ಆರ್.ಆರ್. ನಗರ ಹಾಗೂ ಶಿರಾ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆಯ ಮತದಾನ ಆರಂಭವಾಗಿದ್ದು, ಮತದಾರರು ಕೊರೊನಾ ಸೋಂಕಿನ ನಡುವೆಯೂ ತಮ್ಮ ಹಕ್ಕು ಚಲಾಯಿಸಲು ಆಗಮಿಸುತ್ತಿದ್ದಾರೆ. ಇಂದು ಬೆಳಗ್ಗೆಯಿಂದ 7 ಗಂಟೆಯಿಂದ ಆರಂಭವಾದ ಮತದಾನ ಸಂಜೆ 6 ಗಂಟೆ ವರೆಗೆ ನಡೆಯಲಿದ್ದು, ಸಂಜೆ 5 ಗಂಟೆಯಿಂದ 6 ಗಂಟೆ ವರೆಗೆ ಕೊರೊನಾ ಸೋಂಕಿತರಿಗೆ ಮತ ಹಾಕಲು ಅವಕಾಶ ಮಾಡಿಕೊಡಲಾಗಿದೆ.
ಆರ್.ಆರ್. ನಗರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಮುನಿರತ್ನ, ಕಾಂಗ್ರೆಸ್ ಅಭ್ಯರ್ಥಿಯಾಗಿ ಕುಸುಮಾ ಹನುಮಂತರಾಯಪ್ಪ ಹಾಗೂ ಜೆಡಿಎಸ್ ಅಭ್ಯರ್ಥಿಯಾಗಿ ಕೃಷ್ಣಮೂರ್ತಿ ಅವರು ಸ್ಪರ್ಧಿಸಿದ್ದಾರೆ. ಹಾಗೂ ತುಮಕೂರು ಜಿಲ್ಲೆಯ ಶಿರಾ ಕ್ಷೇತ್ರದಲ್ಲಿ ಶಿರಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ರಾಜೇಶ್ಗೌಡ, ಕಾಂಗ್ರೆಸ್ ಅಭ್ಯರ್ಥಿ ಮಾಜಿ ಸಚಿವ ಟಿ.ಬಿ.ಜಯಚಂದ್ರ, ಜೆಡಿಎಸ್ ಅಭ್ಯರ್ಥಿ ಅಮ್ಮಾಜಮ್ಮ ಅವರು ಸ್ಪರ್ಧಿಸಿದ್ದಾರೆ.
ಆರ್.ಆರ್. ನಗರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಪರ ಪ್ರಚಾರದಲ್ಲಿ ಭಾಗಿಯಾಗಿದ್ದ ಸ್ಯಾಂಡಲ್‍ವುಡ್ ನಟಿ ಅಮೂಲ್ಯ ಅವರೂ ಕೂಡಾ ತಮ್ಮ ಕುಟುಂಬ ಸಮೇತರಾಗಿ ಬಂದು ಮತ ಚಲಾಯಿಸಿದ್ದು, ಎಲ್ಲಾ ಮತದಾರರು ಯಾವುದೇ ಭಯವಿಲ್ಲದೆ ತಮ್ಮ ಹಕ್ಕನ್ನು ಚಲಾಯಿಸಿ ಎಂದು ಮನವಿ ಮಾಡಿಕೊಂಡಿದ್ದಾರೆ.