ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರಿಗೆ ಕೊರೊನಾ ಪಾಸಿಟಿವ್…

110
firstsuddi

ನವದೆಹಲಿ : ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಮನೆಯಲ್ಲೇ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ವೆಂಕಯ್ಯ ನಾಯ್ಡು ಅವರಿಗೆ ಸೋಂಕು ತಗುಲಿರುವ ಬಗ್ಗೆ ಉಪರಾಷ್ಟ್ರಪತಿಗಳ ಕಚೇರಿ ಟ್ವೀಟ್ ಮೂಲಕ ಸ್ಪಷ್ಟಪಡಿಸಿದೆ. ಇಂದು ಬೆಳಿಗ್ಗೆ ಎಂದಿನಂತೆ ಉಪರಾಷ್ಟ್ರಪತಿಗಳು ಕೋವಿಡ್ ಪರೀಕ್ಷೆಗೆ ಒಳಗಾಗಿದ್ದರು. ವರದಿಯಲ್ಲಿ ಅವರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಆದರೆ ಅವರಿಗೆ ರೋಗಲಕ್ಷಣಗಳು ಕಂಡುಬಂದಿಲ್ಲ. ಆರೋಗ್ಯವಾಗಿ ಇದ್ದಾರೆ. ವೈದ್ಯರ ಸಲಹೆ ಮೇರೆಗೆ ಮನೆಯಲ್ಲೇ ಸ್ವಯಂ ಐಸೋಲೇಷನ್‍ನಲ್ಲಿದ್ದಾರೆ. ಇನ್ನು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರ ಪತ್ನಿ ಶ್ರೀಮತಿ ಉಷಾ ನಾಯ್ಡು ಅವರಿಗೆ ಕೊರೊನಾ ನೆಗೆಟಿವ್ ಬಂದಿದ್ದು, ಅವರೂ ಕೂಡಾ ಸ್ವಯಂ ಕ್ವಾರಂಟೈನ್ ನಲ್ಲಿದ್ದಾರೆ ಎಂದು ಉಪರಾಷ್ಟ್ರಪತಿಗಳ ಕಚೇರಿ ತಿಳಿಸಿದೆ.