ಬೆಂಗಳೂರು : ಉಪಚುನಾವಣೆಯ ಮತ ಎಣಿಕೆ ಈಗಾಗಲೇ ಆರಂಭವಾಗಿದ್ದು, ಬಿಜೆಪಿ 11, ಕಾಂಗ್ರೆಸ್ 2, ಜೆಡಿಎಸ್ 2, ಇತರರು ಒಂದರಲ್ಲಿ ಮುನ್ನಡೆ ಸಾಧಿಸಿದ್ದಾರೆ. ಯಲ್ಲಾಪುರ, ಕಾಗವಾಡ, ಅಥಣಿ, ಗೋಕಾಕ್, ಕೆಆರ್ ಪುರಂ, ಚಿಕ್ಕಬಳ್ಳಾಪುರ, ಹಿರೇಕೆರೂರು, ಮಹಾಲಕ್ಷ್ಮಿ ಲೇಔಟ್, ರಾಣೇಬೆನ್ನೂರು, ಕೆಆರ್ ಪೇಟೆ, ವಿಜಯನಗರದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಶಿವಾಜಿನಗರ ಮತ್ತು ಹುಣಸೂರಿನಲ್ಲಿ ಕಾಂಗ್ರೆಸ್, ಯಶವಂತಪುರದಲ್ಲಿ ಜೆಡಿಎಸ್ ಅಭ್ಯರ್ಥಿಗಳು ಮುನ್ನಡೆ ಸಾಧಿಸಿದ್ದರೆ, ಹೊಸಕೋಟೆಯಲ್ಲಿ ಪಕ್ಷೇತರ ಅಭ್ಯರ್ಥಿ ಶರತ್ ಬಚ್ಚೇಗೌಡ ಮುನ್ನಡೆ ಸಾಧಿಸಿದ್ದಾರೆ.










