ಉಮೇಶ್ ಕತ್ತಿ ನಿಧನ – ಬೆಳಗಾವಿಯ ಶಾಲಾ-ಕಾಲೇಜು, ಸರ್ಕಾರಿ ಕಚೇರಿಗಳಿಗೆ ರಜೆ ಘೋಷಣೆ…

72
firstsuddi

ಬೆಳಗಾವಿ/ಬೆಂಗಳೂರು : ರಾಜ್ಯದ ಅರಣ್ಯ, ಆಹಾರ ಮತ್ತು ನಾಗರಿಕ ಪೊರೈಕೆ ಸಚಿವ ಉಮೇಶ್ ಕತ್ತಿ ನಿಧನದ ಹಿನ್ನೆಲೆ ಜಿಲ್ಲೆಯ ಶಾಲಾ-ಕಾಲೇಜು ಹಾಗೂ ಸರ್ಕಾರಿ ಕಚೇರಿಗಳಿಗೆ ರಜೆ ಘೋಷಿಸಲಾಗಿದೆ.

ಸಚಿವರ ನಿಧನಕ್ಕೆ ಸಂತಾಪ ಸೂಚಿಸಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಆಹಾರ ಸಚಿವ ಉಮೇಶ್ ಕತ್ತಿ ನಿಧನ ಹಿನ್ನೆಲೆಯಲ್ಲಿ ಇಂದು ಬೆಳಗಾವಿ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜು, ಸರ್ಕಾರಿ ಕಚೇರಿಗಳಿಗೆ ರಜೆ ಎಂದು ಘೋಷಿಸಿದರು.

ಉಮೇಶ್ ಕತ್ತಿ ಹೃಯಯಾಘಾತದಿಂದ ನಿನ್ನೆ ರಾತ್ರಿ ಬೆಂಗಳೂರಿನ ರಾಮಯ್ಯ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಬೆಂಗಳೂರಿನ ಎಂ.ಎಸ್.ರಾಮಯ್ಯ ಆಸ್ಪತ್ರೆಯಿಂದ ನೇರವಾಗಿ ಹೆಚ್ಎಎಲ್ ಗೆ ಪಾರ್ಥಿವ ಶರೀರವನ್ನು ತೆಗೆದುಕೊಂಡು ಹೋಗಿದ್ದು, ಹೆಲಿಕಾಪ್ಟರ್ ನಲ್ಲಿ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಏರ್ ಲಿಫ್ಟ್ ಮಾಡುವ ಕೆಲಸ ನಡೆಯುತ್ತಿದೆ. ವಿಶ್ವರಾಜ್ ಸಕ್ಕರೆ ಕಾರ್ಖಾನೆಯಲ್ಲಿ ಅಂತಿಮ ದರ್ಶನಕ್ಕೆ ಅವಕಾಶವಿದ್ದು, ನಂತರ ಸ್ವಗ್ರಾಮ ಬೆಲ್ಲದ ಬಾಗೇವಾಡಿಯಲ್ಲಿ ಸರ್ಕಾರದ ಗೌರವದೊಂದಿಗೆ ಸಂಜೆ 5 ಗಂಟೆಗೆ ಅಂತ್ಯಕ್ರಿಯೆ ನಡೆಯಲಿದೆ.