ಉಮೇಶ್ ಪಾಲ್ ಕೊಲೆ ಪ್ರಕರಣ ; ಪೊಲೀಸ್ ಎನ್​ಕೌಂಟರ್​ನಲ್ಲಿ ಮತ್ತೊಬ್ಬ ಆರೋಪಿ ಸಾವು…

67
firstsuddi

ಲಕ್ನೋ : ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆದ ಉಮೇಶ್ ಪಾಲ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಾರದ ಹಿಂದೆ ಉತ್ತರ ಪ್ರದೇಶದ ಪೊಲೀಸರು ಆರೋಪಿಯೊಬ್ಬನನ್ನು ಗುಂಡಿಕ್ಕಿ ಕೊಂದಿದ್ದರು. ಇದೀಗ ಪೊಲೀಸರು ಮತ್ತೆ ಎನ್​ಕೌಂಟರ್​ ನಡೆಸಿದ್ದು, ಮತ್ತೊಬ್ಬ ಆರೋಪಿ ಸಾವನ್ನಪ್ಪಿದ್ದಾನೆ.

ಪ್ರಯಾಗ್ರಾಜ್ ನ ಕೌಂಧಿಯಾರ ಪ್ರದೇಶದಲ್ಲಿ ವಿಜಯ್ ಕುಮಾರ್ ಅಲಿಯಾಸ್ ಉಸ್ಮಾನ್ ಚೌಧರಿ ಮೇಲೆ ಗುಂಡು ಹಾರಿಸಲಾಗಿತ್ತು, ಗುಂಡಿನ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಆತನನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತು, ಆದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.

2005ರಲ್ಲಿ ಅಲಹಾಬಾದ್ ವಿಧಾನಸಭಾ ಚುನಾವಣೆಯಲ್ಲಿ ಬಿಎಸ್‌ಪಿ ನಾಯಕ ರಾಜು ಪಾಲ್ ಗೆದ್ದಿದ್ದರು. ಇದಾದ 1 ತಿಂಗಳಲ್ಲಿ ಅವರನ್ನು ಹತ್ಯೆ ಮಾಡಲಾಗಿತ್ತು. ರಾಜು ಪಾಲ್ ಹತ್ಯೆ ಪ್ರಕರಣದಲ್ಲಿ ಉಮೇಶ್ ಪಾಲ್ ಸಾಕ್ಷಿಯಾಗಿದ್ದರು, ಕಳೆದ ತಿಂಗಳು ಉಮೇಶ್ ಪಾಲ್ ಅವರನ್ನು ಪ್ರಯಾಗ್‌ರಾಜ್‌ನಲ್ಲಿರುವ ಅವರ ನಿವಾಸದಲ್ಲಿ ಗುಂಡಿಕ್ಕಿ ಕೊಲ್ಲಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದುವರೆಗೆ 40 ಜನರನ್ನು ಆರೋಪಿಗಳೆಂದು ಪೊಲೀಸರು ಹೆಸರಿಸಿದ್ದಾರೆ.

ಗ್ಯಾಂಗ್‌ಸ್ಟರ್ ಹಾಗೂ ರಾಜಕಾರಣಿ ಅತಿಕ್ ಅಹ್ಮದ್, ಆತನ ಸಹೋದರ ಮತ್ತು ಮಾಜಿ ಶಾಸಕ ಅಶ್ರಫ್ ರಾಜು ಪಾಲ್ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಗಳಾಗಿದ್ದಾರೆ. ಇವರಿಬ್ಬರೂ ಸದ್ಯ ಜೈಲಿನಲ್ಲಿದ್ದಾರೆ.