ಬೆಂಗಳೂರು : ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರ ವಿರುದ್ಧ ಬಿಜೆಪಿ ಟ್ವೀಟ್ ಮಾಡಿದ್ದು, ಮಾನ್ಯ ಕುಮಾರಣ್ಣ ಅವರೇ, ಊಟಕ್ಕೆ ಗತಿಯಿಲ್ಲದ ಯುವಕರು ಸೈನ್ಯಕ್ಕೆ ಸೇರುತ್ತಾರೆ ಎಂದು ಹೇಳಿರುವ ನಿಮಗೆ ನಾಚಿಕೆಯಾಗಬೇಕು. ಯುವಕರು ದೇಶಭಕ್ತಿಯಿಂದ ಸೈನ್ಯಕ್ಕೆ ಸೇರುತ್ತಾರೆಯೇ ಹೊರತು ಯಾವುದೇ ಆಸೆ, ಆಮಿಷಗಳಿಂದಲ್ಲ. ಸೈನಿಕರ ಬಗ್ಗೆ ಕೀಳಾಗಿ ಮಾತನಾಡಿದ ನಿಮ್ಮನ್ನು ನಾಡಿನ ಜನತೆ ಕ್ಷಮಿಸಲಾರರು. ಸೈನ್ಯಕ್ಕೆ ಸೇರುವವರು ಬಡಕುಟುಂಬದ ಯುವಕರೇ ಹೊರತು ಶ್ರೀಮಂತರ ಮನೆ ಮಕ್ಕಳಲ್ಲ ಎನ್ನುವ ನೀವು, ತಮ್ಮ ಮಗನಿಗೆ ಲೋಕಸಭಾ ಚುನಾವಣಾ ಟಿಕೆಟ್ ಕೊಡಿಸುವಲ್ಲಿ ತೋರಿಸಿದ ಉತ್ಸಾಹವನ್ನು, ದೇಶ ಕಾಯಲು ಆತನನ್ನು ಸೈನ್ಯಕ್ಕೆ ಕಳುಹಿಸುವಲ್ಲಿ ಯಾಕೆ ತೋರಿಸಲಿಲ್ಲ? ನಿಮಗೆ ಅರ್ಥವಾಗಲೆಂದೇ ನೀವೇ ಕನ್ನಡದಲ್ಲಿ ಮಾತನಾಡಿದ ವಿಡಿಯೋವನ್ನು ಹಾಕಿದ್ದೇವೆ. ನಿಮಗೆ ಕನ್ನಡ ಅರ್ಥವಾಗದಿದ್ದರೆ ಕನ್ನಡದ ಮೇಷ್ಟ್ರು ಸಿದ್ದರಾಮಯ್ಯ ಅವರನ್ನು ಕೇಳಿ ತಿಳಿದುಕೊಳ್ಳಿ. ಇದರಲ್ಲಾದರೂ ನೀವು ಮತ್ತು ಅವರು ‘ಸಮನ್ವಯ’ ಸಾಧಿಸುವಂತಾಗಲಿ ಎಂದು ಬಿಜೆಪಿ ಟ್ವೀಟ್ ಮಾಡಿದೆ.













