ಎಂಇಎಸ್ ಪುಂಡರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚನೆ : ಸಿಎಂ ಬೊಮ್ಮಾಯಿ.

54
firstsuddi

ಹುಬ್ಬಳ್ಳಿ : ಎಂಇಎಸ್ ಪುಂಡರ ಪುಂಡಾಟಿಕೆಯನ್ನು ನಾನು ಖಂಡಿಸುತ್ತೇನೆ. ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಈಗಾಗಲೇ ಸೂಚಿಸಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಬೊಮ್ಮಾಯಿ ಅವರು, ಈಗಾಗಲೇ ಹಲವರನ್ನು ಬಂಧಿಸಲಾಗಿದೆ. ಸಾರ್ವಜನಿಕರ ಆಸ್ತಿ ಹಾನಿ ಮಾಡುವುದು ಕಾನೂನುಬಾಹಿರ. ಪುಂಡಾಟಿಕೆ ಹಿಂದೆ ಹಲವು ಕಾರಣಗಳಿವೆ. ರಾಷ್ಟ್ರಭಕ್ತರ ಪ್ರತಿಮೆಗಳನ್ನ ಗೌರವಿಸಬೇಕು. ಅವರಿಗೆ ಅಪಮಾನ ಮಾಡಬಾರದು. ಸಮಾಜದಲ್ಲಿ ಕ್ಷೋಭೆ ಉಂಟು ಮಾಡುವುದು ಸರಿಯಲ್ಲ. ಪೊಲೀಸರಿಗೆ ದೀರ್ಘಾವಧಿ ಕ್ರಮ ಕೈಗೊಳ್ಳುವಂತೆ ಆದೇಶಿಸಿದ್ದೇನೆ. ಇದು ಪುರ್ನಾವರ್ತನೆ ಆಗದಂತೆ ಸೂಚಿಸಿದ್ದೇನೆ ಎಂದು ಹೇಳಿದ್ದಾರೆ.