ಹಾಸನ : ಹಾಸನ ಸ್ಥಳೀಯ ಸಂಸ್ಥೆಗಳಿಂದ ನಡೆಯುವ ಚುನಾವಣೆಗೆ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ಸೂರಜ್ ರೇವಣ್ಣ ಸ್ಪರ್ಧಿಸುತ್ತಿರುವುದು ಬಹುತೇಕ ಫಿಕ್ಸ್ ಆಗಿದ್ದು, ಅಂತಿಮ ಘೋಷಣೆಯೊಂದೇ ಬಾಕಿ ಇದೆ.
ಹಾಸನ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಮಾಜಿ ಸಚಿವ ಎಚ್. ಡಿ. ರೇವಣ್ಣ ಪುತ್ರ ಡಾ. ಸೂರಜ್ ರೇವಣ್ಣ ಅಥವ ರೇವಣ್ಣ ಪತ್ನಿ ಭವಾನಿ ರೇವಣ್ಣ ಸ್ಪರ್ಧಿಸಲಿದ್ದಾರೆ ಎಂಬ ಸುದ್ದಿ ಹಬ್ಬಿತ್ತು. ಪಕ್ಷದ ವರಿಷ್ಠ ಎಚ್. ಡಿ. ದೇವೇಗೌಡರು ಅಭ್ಯರ್ಥಿ ಆಯ್ಕೆ ಬಗ್ಗೆ ಜಿಲ್ಲೆಯ ಶಾಸಕರ ಜೊತೆ ಸಭೆ ನಡೆಸಿದ್ದರು. ಕೆಲವು ಶಾಸಕರು ಸಹ ಡಾ. ಸೂರಜ್ ರೇವಣ್ಣಗೆ ಟಿಕೆಟ್ ನೀಡಬೇಕು ಎಂದು ಒತ್ತಾಯ ಮಾಡಿದ್ದರು. ಅಂತಿಮವಾಗಿ ಪಕ್ಷ ಸೂರಜ್ ರೇವಣ್ಣ ಅವರನ್ನು ಕಣಕ್ಕಿಳಿಸಲು ತೀರ್ಮಾನಿಸಿದೆ ಎಂಬ ಮಾತುಗಳು ಕೇಳಿ ಬರುತ್ತಿದ್ದು, ನಾಳೆ ಸೂರಜ್ ರೇವಣ್ಣ ನಾಮಪತ್ರ ಸಲ್ಲಿಸುವ ಸಾಧ್ಯತೆ ಇದೆ.










