ಬೀದರ್ : ಎಂಬಿಬಿಎಸ್ ವಿದ್ಯಾರ್ಥಿಯೋರ್ವ ಹಾಸ್ಟೆಲ್ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದಲ್ಲಿ ನಡೆದಿದೆ.
ಶ್ರೀರಾಮ್(22) ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿ. ಶ್ರೀರಾಮ್ ಬೀದರ್ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ (ಬ್ರಿಮ್ಸ್) ಅಂತಿಮ ವರ್ಷದ ವೈದ್ಯಕೀಯ ವಿದ್ಯಾರ್ಥಿಯಾಗಿದ್ದನು. ಬ್ರಿಮ್ಸ್ ಹಾಸ್ಟೆಲ್‌ನಲ್ಲಿ ವಾಸವಿದ್ದ ಆತ ಬೆಳಗ್ಗೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಶ್ರೀರಾಮ್ ಬೀದರ್ ನಗರದ ಚಿಟಗುಪ್ಪ ತಾಲೂಕಿನವನಾಗಿದ್ದು, ತಂದೆಯ ಮರಣದ ನಂತರ ಖಿನ್ನತೆಗೆ ಒಳಗಾಗಿದ್ದನು. ಶ್ರೀರಾಮ್ ಕಾಲೇಜಿನಲ್ಲಿ ಟಾಪರ್ ಆಗಿದ್ದ ಎನ್ನಲಾಗಿದೆ. ಸ್ಥಳಕ್ಕೆ ನ್ಯೂ ಟೌನ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.










