ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆ ರಾಜ್ಯದಲ್ಲಿ ನೀತಿ ಸಂಹಿತೆ ಜಾರಿಯಲ್ಲಿದೆ. ಆದರೂ ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿ ಎಟಿಎಂ ವಾಹನಗಳಲ್ಲಿ ಸಾಗಿಸುತ್ತಿದ್ದ 4.75 ಕೋಟಿ ರೂ. ಹಣವನ್ನು ಹೆಬ್ಬಗೋಡಿ ಪೊಲೀಸರು ವೀರಸಂದ್ರ ಸಿಗ್ನಲ್ ಬಳಿಯ ಚೆಕ್ಪೋಸ್ಟ್ ಬಳಿ ಸೀಜ್ ಮಾಡಿದ್ದಾರೆ.
ರೈಟರ್ಸ್ ಕಂಪನಿಯ ಮೂರು ವಾಹನಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಿನ್ನೆ 10 ಲಕ್ಷದಷ್ಟು ಹೆಚ್ಚುವರಿ ಹಣ ಸಾಗಾಟ ಹಿನ್ನೆಲೆ ದೂರು ದಾಖಲಾಗಿತ್ತು. ಹಣ ಸಾಗಿಸಲು ಆರ್ಬಿಐ ಮಾರ್ಗಸೂಚಿಯನ್ನು ಪಾಲನೆ ಮಾಡಿಲ್ಲ. ನಿಯಮ ಉಲ್ಲಂಘಿಸಿದ ಪರಿಣಾಮ ಎಟಿಎಂ ವಾಹನಗಳನ್ನು ವಶಕ್ಕೆ ಪಡೆದು ಹಣವನ್ನು ಸೀಜ್ ಮಾಡಲಾಗಿದೆ.










