ಎರಡನೇ ಬಾರಿಗೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಕೊರೊನಾ…

74
firstsuddi

ನವದೆಹಲಿ : ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಮತ್ತೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಮೂರು ತಿಂಗಳ ಅಂತರದಲ್ಲಿ ಎರಡನೇ ಬಾರಿ ಕೊರೊನಾ ಪಾಸಿಟಿವ್ ವರದಿಯಾಗಿದೆ.

ಈ ಬಗ್ಗೆ ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್ ಟ್ವೀಟ್ ಮಾಡಿದ್ದು, ಸೋನಿಯಾ ಗಾಂಧಿ ಅವರಿಗೆ ಕೊರೊನಾ ಸೋಂಕು ದೃಢವಾಗಿದ್ದು, ಈ ಹಿನ್ನೆಲೆಯಲ್ಲಿ ಐಸೋಲೇಶನ್ ಗೆ ಒಳಗಾಗಿದ್ದಾರೆ ಎಂದು ತಿಳಿಸಿದ್ದಾರೆ.

ಈ ಹಿಂದೆ ಸೋನಿಯಾ ಗಾಂಧಿಗೆ ಜೂ.8ರಂದು ಕೊರೊನಾ ಸೋಂಕು ಕಾಣಿಸಿಕೊಂಡು ದೆಹಲಿಯ ಆಸ್ಪತ್ರೆಗೆ ದಾಖಲಾಗಿದ್ದರು. ಆ ಬಳಿಕ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು.

ಈ ವಾರದ ಆರಂಭದಲ್ಲಿ ಸೋನಿಯಾ ಗಾಂಧಿ ಅವರ ಮಗಳು ಮತ್ತು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾಗೂ ಕೂಡ ಕೊರೊನಾ ಸೋಂಕು ತಗುಲಿತ್ತು.