ಎರಡು ಕಾರುಗಳ ನಡುವೆ ಡಿಕ್ಕಿ- ಇಬ್ಬರು ಸ್ಥಳದಲ್ಲೇ ಸಾವು…

46
firstsuddi

ಬೆಳಗಾವಿ: ಎರಡು ಕಾರುಗಳ ನಡುವೆ ಡಿಕ್ಕಿಯಾಗಿ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಇಂಚಲ ಬಳಿ ನಡೆದಿದೆ.

ಮಂಗಲಾ ಭರಮನಾಯ್ಕರ್(50) ಹಾಗೂ ಚಾಲಕ ಶ್ರೀಶೈಲ(40) ಸಾವನ್ನಪ್ಪಿದ ದುರ್ದೈವಿಗಳು. ಇನ್ನುಳಿದಂತೆ ಘಟನೆಯಲ್ಲಿ ನಾಲ್ವರಿಗೆ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಈ ಕುರಿತು ಮುರಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.