ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ-ಸ್ಥಳದಲ್ಲೇ ಮೂವರು MBBS ವಿದ್ಯಾರ್ಥಿಗಳ ಸಾವು…

244
firstsuddi

ರಾಯಚೂರು : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಮೂವರು ಎಂಬಿಬಿಎಸ್ ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಮಂಜರ್ಲಾ ಬಳಿ ನಡೆದಿದೆ. ಮೃತರನ್ನು ಗಣೇಶ್, ಬಸವರಾಜ್ ಹಾಗೂ ಅಭಿಷೇಕ್ ಎಂದು ಗುರುತಿಸಲಾಗಿದೆ. ರಾಯಚೂರಿನ ನವೋದಯ ಕಾಲೇಜಿನಲ್ಲಿ ಅಂತಿಮ ವರ್ಷದ ಎಂಬಿಬಿಎಸ್ ಓದುತ್ತಿದ್ದ ವಿದ್ಯಾರ್ಥಿಗಳು ಮಂತ್ರಾಲಯದಿಂದ ಊಟ ಮುಗಿಸಿಕೊಂಡು ರಾಯಚೂರಿಗೆ ವಾಪಸ್ಸಾಗುತ್ತಿದ್ದ ವೇಳೆ ತೆಲಂಗಾಣದ ಪಾಸ್ ಇದ್ದ ಕಾರು ವಿದ್ಯಾರ್ಥಿಗಳಿದ್ದ ಕಾರಿಗೆ ಡಿಕ್ಕಿ ಹೊಡೆದಿದ್ದು, ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ರಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯ ತೀವ್ರತೆಗೆ ಎರಡು ಕಾರುಗಳು ಸಂಪೂರ್ಣ ಜಖಂಗೊಂಡಿದ್ದು, ಈ ಕುರಿತು ಯರಗೇರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.