ಎರಡು ಗುಂಪುಗಳ ನಡುವೆ ಘರ್ಷಣೆ-ಓರ್ವನ ಕೊಲೆಯಲ್ಲಿ ಅಂತ್ಯ…

187
firstsuddi

ದೊಡ್ಡಬಳ್ಳಾಪುರ : ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಘರ್ಷಣೆ ಸಂಭವಿಸಿ ಓರ್ವ ಯುವಕ ಮೃತಪಟ್ಟಿರುವ ಘಟನೆ ರಾಜಾನುಕುಂಟೆ ಹೊರವಲಯದ ಮೈಲಪನಹಳ್ಳಿ ರಸ್ತೆಯಲ್ಲಿ ನಡೆದಿದೆ. ಸಂತೋಷ್(27) ಮೃತ ದುರ್ದೈವಿ ಎಂದು ಗುರುತಿಸಲಾಗಿದ್ದು, ಹಳೇ ವೈಷಮ್ಯದಿಂದ ಎರಡು ಗುಂಪುಗಳ ನಡುವೆ ಘರ್ಷಣೆ ಸಂಭವಿಸಿದೆ ಎನ್ನಲಾಗಿದ್ದು, ಈ ವೇಳೆ ರಾಡ್‍ನಿಂದ ಹೊಡೆದಾಡಿಕೊಂಡಿದ್ದಾರೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ಮತ್ತೋರ್ವ ಯುವಕನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಮೃತ ಯುವಕನ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ರಾಜಾನುಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.