ಎರಡು ಟ್ರಕ್‍ಗಳ ನಡುವೆ ಮುಖಾಮುಖಿ ಡಿಕ್ಕಿ-11 ಮಂದಿ ಸಾವು…

159
firstsuddi

ಗುಜರಾತ್ : ಎರಡು ಟ್ರಕ್‍ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ 11 ಮಂದಿ ಮೃತಪಟ್ಟಿರುವ ಘಟನೆ ಗುಜರಾತ್ ನ ವಡೋದರದಲ್ಲಿ ನಡೆದಿದೆ. ಇಂದು ಮುಂಜಾನೆ 3 ಗಂಟೆ ಸುಮಾರಿಗೆ ಪಾವಘಡದಿಂದ ಸೂರತ್ ಗೆ ತೆರಳುತ್ತಿದ್ದ ಟ್ರಕ್ ಎದುರಿಗೆ ಬರುತ್ತಿದ್ದ ಮತ್ತೊಂದು ಟ್ರಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಮಹಿಳೆಯರು ಸೇರಿದಂತೆ 11 ಮಂದಿ ಮೃತಪಟ್ಟಿದ್ದಾರೆ. ಅಲ್ಲದೇ ಘಟನೆಯಲ್ಲಿ 15 ಮಂದಿ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆಯ ವಿಷಯ ತಿಳಿಯುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಟ್ವಿಟರ್ ಖಾತೆಯ ಮೂಲಕ ಸಂತಾಪ ಸೂಚಿಸಿದ್ದು, ವಡೋದರಾದ ಅಪಘಾತದಿಂದ ದುಃಖಿತನಾಗಿದ್ದೇನೆ. ನನ್ನ ಆಲೋಚನೆಗಳು ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರೊಂದಿಗೆ ಇದೆ. ಗಾಯಗೊಂಡವರು ಶೀಘ್ರದಲ್ಲೇ ಚೇತರಿಸಿಕೊಳ್ಳಬೇಕೆಂದು ಪ್ರಾರ್ಥಿಸುತ್ತೇನೆ ಎಂದು ಸಂತಾಪ ಸೂಚಿಸಿದ್ದಾರೆ.