ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು ಎರಡು ತಿಂಗಳು ಕಳೆಯುವ ಮನ್ನವೇ 4000ಕ್ಕೂ ಅಧಿಕ ಸರ್ಕಾರಿ ನೌಕರರನ್ನು ವರ್ಗಾವಣೆ ಮಾಡುವ ಮೂಲಕ ಇತಿಹಾಸದ ನಂಬರ್ ಒನ್ ಟ್ರಾನ್ಸ್ ಸರ್ಕಾರ ಎಂಬ ದಾಖಲೆಯನ್ನು ಸೃಷ್ಟಿ ಮಾಡಿದೆ. ಕೆಎಎಸ್, ಐಎಎಸ್, ಸಹಕಾರ, ಐಪಿಎಸ್ ಹಾಗೂ ಪೊಲೀಸ್ ಇಲಾಖೆ ಸೇರಿದಂತೆ ಹಲವು ಇಲಾಖೆಗಳಲ್ಲಿ ದೊಡ್ಡ ಮಟ್ಟದಲ್ಲಿ ವರ್ಗಾವಣೆ ಪ್ರಕ್ರಿಯೆ ನಡೆದಿದ್ದು, ಈ ಮೂಲಕ ಕರ್ನಾಟಕದ ಇತಿಹಾಸದಲ್ಲಿ ಯಾವ ಸರ್ಕಾರವು ಅಧಿಕಾರಕ್ಕೆ ಬರುತ್ತಿದ್ದಂತೆ ಇಷ್ಟು ವರ್ಗಾವಣೆ ಪ್ರಕ್ರಿಯೆ ನಡೆಸಿರಲಿಲ್ಲ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.










