ಬೆಂಗಳೂರು: ಎರಡು ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿಯಾగి ಪೊಲೀಸ್ ಹೆಡ್ ಕಾನ್ಸ್ಟೇಬಲ್ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಬೆಂಗಳೂರು- ಹಾಸನ ಹೆದ್ದಾರಿಯ ಸರ್ವೀಸ್ ರಸ್ತೆಯಲ್ಲಿ ನಡೆದಿದೆ.
ಶ್ರೀನಿವಾಸ್ ಮೃತ ಪೊಲೀಸ್ ಹೆಡ್ ಕಾನ್ಸ್ಟೇಬಲ್. ಸೋಲೂರು ಮೂಲದ ಮೃತ ಪೊಲೀಸ್ ಹೆಡ್ ಕಾನ್ಸ್ಟೇಬಲ್ ಬೆಂಗಳೂರಿನ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಸದ್ಯ ಡ್ಯೂಟಿ ಮುಗಿಸಿ ಮನೆಗೆ ಹೋಗ್ತಿದ್ದ ವೇಳೆ ಮತ್ತೊಂದು ಬೈಕ್ ಬಂದು ಡಿಕ್ಕಿ ಹೊಡೆದಿದೆ. ಪರಿಣಾಮ ಹೆಡ್ ಕಾನ್ಸ್ಟೇಬಲ್ ಶ್ರೀನಿವಾಸ್ ಸ್ಥಳದಲ್ಲೇ ಸಾವನಪ್ಪಿದ್ದಾರೆ.
ಈ ಸಂಬಂಧ ಕುದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.










