ಎರಡು ವರ್ಷದ ಹಸುಳೆ ಮೇಲೆ ಎರಗಿದ ಕಾಮುಕ…!

268
firstsuddi

ಬೆಂಗಳೂರು : ಚಾಕಲೇಟ್ ಕೊಡಿಸುವುದಾಗಿ ಹೇಳಿ ಎರಡು ವರ್ಷದ ಬಾಲಕಿಯನ್ನು ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ನಗರದ ಯಲಹಂಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಾಲಕಿ ತನ್ನ ಮನೆಯ ಮುಂದೆ ಆಟವಾಡುತ್ತಿದ್ದ ವೇಳೆ 54 ವರ್ಷದ ಆರೋಪಿ ಚಾಕಲೇಟ್ ಕೊಡಿಸುವುದಾಗಿ ಕರೆದುಕೊಂಡು ಹೋಗಿ ಈ ಕೃತ್ಯ ಎಸಗಿದ್ದು, ಮಗು ಜೋರಾಗಿ ಅಳುತ್ತಿದ್ದನ್ನು ಕೇಳಿದ ಸ್ಥಳೀಯರು ಹೋಗಿ ನೋಡಿದಾಗ ಈ ಘಟನೆ ಬೆಳಕಿಗೆ ಬಂದಿದ್ದು, ಸ್ಥಳೀಯರು ಕಾಮುಕನನ್ನು ಹಿಡಿದು ಹಿಗ್ಗಾ ಮುಗ್ಗಾ ಥಳಿಸಿದ್ದಾರೆ. ಈ ಕುರಿತು ಯಲಹಂಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.