ಎಲ್ಲ ರಾಜ್ಯಗಳ ಸಿಎಂಗಳ ಜೊತೆ ಇಂದು ಮೋದಿ ಕೋವಿಡ್ ಸಭೆ…

61
firstsuddi

ನವದೆಹಲಿ : ದೇಶದಲ್ಲಿ ಕೋವಿಡ್ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಲಿದ್ದಾರೆ.

ಪ್ರಧಾನ ಮಂತ್ರಿ ಕಚೇರಿ ಪ್ರಕಾರ, ವರ್ಚುವಲ್ ಸಭೆಯು ಇಂದು ಮಧ್ಯಾಹ್ನ 12 ಗಂಟೆಗೆ ನಡೆಯಲಿದೆ. ಈ ಸಭೆಯಲ್ಲಿ ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಕೂಡ ಭಾಗಿಯಾಗಲಿದ್ದು, ಪರಿಸ್ಥಿತಿಯ ವಿವರಣೆ ನೀಡಲಿದ್ದಾರೆಂದು ಸರ್ಕಾರದ ಮೂಲಗಳು ತಿಳಿಸಿವೆ.

ಇನ್ನೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ದಕ್ಷಿಣ ಕನ್ನಡ ಜಿಲ್ಲೆಯ ಪ್ರವಾಸದಲ್ಲಿದ್ದು, ಅಲ್ಲಿಂದಲೇ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆಯಲ್ಲಿ ಭಾಗಿಯಾಗಲಿದ್ದಾರೆಂದು ತಿಳಿದುಬಂದಿದೆ.