ಎಳೆಯ ಮಕ್ಕಳನ್ನು ಕೂರಿಸಿಕೊಂಡು ಕೊಳಕು ರಾಜಕೀಯದ ಭಾಷಣ ಮಾಡಿದ ಮೋದಿ ಅವರನ್ನು ಆ ಪವಿತ್ರ ನೆಲ ಕ್ಷಮಿಸದು : ಸಿದ್ದರಾಮಯ್ಯ

256
firstsuddi

ಬೆಂಗಳೂರು : ಇಂದು ಪ್ರಧಾನಿ ನರೇಂದ್ರ ಮೋದಿ ಅವರು ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಮಕ್ಕಳನ್ನು ಉದ್ದೇಶಿಸಿ ಮಾತನಾಡಿದ್ದು, ಮೋದಿ ಅವರ ಭಾಷಣದ ಬಗ್ಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿದ್ದಾರೆ. “ತುಮಕೂರಿನ ಸಿದ್ದಗಂಗಾ ಮಠಕ್ಕೆ ಜಾತ್ಯತೀತ ಮತ್ತು ಪಕ್ಷಾತೀತವಾದ ಗೌರವದ ಸ್ಥಾನ ಇದೆ. ಈ ಕಾರಣಕ್ಕಾಗಿಯೇ ಅದು ಸರ್ವರೂ ಭಕ್ತಿಯಿಂದ ನಮಿಸುವ ಕ್ಷೇತ್ರ. ಇಂತಹ ಕ್ಷೇತ್ರದಲ್ಲಿ ಎಳೆಯ ಮಕ್ಕಳನ್ನು ಕೂರಿಸಿಕೊಂಡು ಕೊಳಕು ರಾಜಕೀಯದ ಭಾಷಣ ಮಾಡಿದ ನರೇಂದ್ರ ಮೋದಿ ಅವರೇ, ನಿಮ್ಮನ್ನು ಆ ಪವಿತ್ರ ನೆಲ ಕ್ಷಮಿಸದು.” ಎಂದು ಟ್ವೀಟ್ ಮಾಡಿದ್ದಾರೆ.