ಎಸ್ಎಸ್ಎಲ್​ಸಿ ಪರೀಕ್ಷೆ ಬರೆಯುತ್ತಿದ್ದ ವೇಳೆ ಅಸ್ವಸ್ಥಗೊಂಡು ವಿದ್ಯಾರ್ಥಿ ಸಾವು…

46
firstsuddi

ತುಮಕೂರು: ಎಸ್ಎಸ್ಎಲ್​ಸಿ ಪರೀಕ್ಷೆ ಬರೆಯುತ್ತಿದ್ದ ವೇಳೆ ವಿದ್ಯಾರ್ಥಿ ಅಸ್ವಸ್ಥಗೊಂಡಿದ್ದು, ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ತುರುವೇಕೆರೆ ಪಟ್ಟಣದ ದಬ್ಬೇಘಟ್ಟ ರಸ್ತೆಯಲ್ಲಿನ ಸರಸ್ವತಿ ಬಾಲಕರ ಪ್ರೌಢಶಾಲಾ ಪರೀಕ್ಷಾ ಕೇಂದ್ರದಲ್ಲಿ ನಡೆದಿದೆ.

ಮೃತ ವಿದ್ಯಾರ್ಥಿಯನ್ನು ಚಿಕ್ಕನಾಯಕನಹಳ್ಳಿ ತಾಲೂಕಿನ ಚಿಕ್ಕರಾಂಪುರ ನಿವಾಸಿ ಸಿದ್ದೇಶ್ ಅವರ ಮಗ ಮೋಹನ್ ಕುಮಾರ್ ಸಿಎಸ್(16) ಎಂದು ಗುರುತಿಸಲಾಗಿದೆ. ಮೋಹನ್ ಕುಮಾರ್, ತುರುವೇಕೆರೆ ತಾಲ್ಲೂಕಿನ ಲೋಕಮ್ಮನಹಳ್ಳಿ ಗೇಟ್ ಬಳಿಯಿರುವ ಶ್ರೀ ಕಂಚಿರಾಯ ಸನಿವಾಸ ಪ್ರೌಢ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರು.

ತುರುವೇಕೆರೆ ಪಟ್ಟಣದ ದಬ್ಬೇಘಟ್ಟ ರಸ್ತೆಯಲ್ಲಿನ ಸರಸ್ವತಿ ಬಾಲಕರ ಪ್ರೌಢಶಾಲಾ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆಯುತ್ತಿದ್ದ ವೇಳೆ ಮೋಹನ್ ಕುಮಾರ್ ಸಿ.ಎಸ್ ಅಸ್ವಸ್ಥಗೊಂಡಿದ್ದಾನೆ. ತಕ್ಷಣ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಥಮ ಚಿಕಿತ್ಸೆ ನೀಡಲಾಗಿದೆ. ಆದರೆ ವೈದ್ಯರು ಜಿಲ್ಲಾ ಆಸ್ಪತ್ರೆಗೆ ಕರೆದುಕೊಂಡು ಹೋಗುವಂತೆ ಶಿಕ್ಷಕರಿಗೆ ಸೂಚಿಸಿದ್ದಾರೆ. ಕೂಡಲೇ ಅಂಬ್ಯುಲೆನ್ಸ್ ಮೂಲಕ ಜಿಲ್ಲಾ ಆಸ್ಪತ್ರೆಗ ಸಾಗಿಸುವಾಗ ಗುಬ್ಬಿ ಸಮೀಪ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ.