ಎಸ್ಎಸ್ಎಲ್​ಸಿ ಪೂರಕ ಪರೀಕ್ಷೆ ವೇಳಾಪಟ್ಟಿ ಪ್ರಕಟ…

54
firstsuddi

ಬೆಂಗಳೂರು : ಇಂದು ಎಸ್ಎಸ್ಎಲ್​ಸಿ ಪರೀಕ್ಷಾ ಫಲಿತಾಂಶ ಪ್ರಕಟಗೊಂಡ ಬೆನ್ನಲ್ಲೇ ಪೂರಕ ಪರೀಕ್ಷೆಯ ದಿನಾಂಕ ಪ್ರಕಟವಾಗಿದೆ.

ಜೂನ್ 27ರಿಂದ ಜುಲೈ 4ರವರೆಗೆ ಪೂರಕ ಪರೀಕ್ಷೆ ನಡೆಯಲಿದೆ. ಆನ್ ಲೈನ್ ಮುಖಾಂತರ ನೋಂದಾಯಿಸಿಕೊಳ್ಳಬಹುದಾಗಿದ್ದು, ಮೇ 30ರವರೆಗೆ ಅವಕಾಶ ಕಲ್ಪಿಸಲಾಗಿದೆ. 2002-03ರಿಂದ 2021- 22ರ ಮುಖ್ಯ ಪರೀಕ್ಷೆವರೆಗೆ ಮತ್ತು 2002-2003ಕ್ಕೂ ಹಿಂದಿನ ವರ್ಷಗಳಲ್ಲಿ ಅನುತ್ತೀರ್ಣರಾದ ಅಭ್ಯರ್ಥಿಗಳು ಈ ಪೂರಕ ಪರೀಕ್ಷೆಗೆ ಹೆಸರು ನೋಂದಾಯಿಸಿಕೊಳ್ಳಬಹುದು. ಬೆಳಗ್ಗೆ 10:30ರಿಂದ 1:45ರ ತನಕ ಪರೀಕ್ಷೆ ನಡೆಯಲಿದ್ದು, ಪ್ರತಿ ವಿಷಯಕ್ಕೂ ಪ್ರಶ್ನೆ ಪತ್ರಿಕೆ ಓದಲು 15 ನಿಮಿಷಗಳನ್ನ ನೀಡಲಾಗಿದೆ.

ಪೂರಕ ಪರೀಕ್ಷೆ ವೇಳಾಪಟ್ಟಿ ಹೀಗಿದೆ..
• 27-6-2022- ವಿಜ್ಞಾನ, ರಾಜ್ಯಶಾಸ್ತ್ರ, ಕರ್ನಾಟಕ/ ಹಿಂದೂಸ್ತಾನಿ ಸಂಗೀತ

• 28-6-2022- ಪ್ರಥಮ ಭಾಷೆ (ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಸಂಸ್ಕೃತ)

• 29-6-2022- ದ್ವಿತೀಯ ಭಾಷೆ (ಇಂಗ್ಲಿಷ್, ಕನ್ನಡ)

• 30-6-2022- ಸಮಾಜ ವಿಜ್ಞಾನ

• 01-7-2022- ತೃತೀಯ ಭಾಷೆ (ಹಿಂದಿ, ಕನ್ನಡ, ಇಂಗ್ಲಿಷ್, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು) ಹಾಗೂ ಎನ್ ಎಸ್ ಕ್ಯೂಎಫ್ ವಿಷಯಗಳು (ಮಾಹಿತಿ ತಂತ್ರಜ್ಞಾನ, ರಿಟೇಲ್, ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಆ್ಯಂಡ್ ವೆಲ್ ನೆಸ್

• 02-7-2022- ಅರ್ಥಶಾಸ್ತ್ರ, ಕೋರ್ ಸಬ್ಜೆಕ್ಟ್

• 04-7-2022- ಗಣಿತ, ಸಮಾಜಶಾಸ್ತ್ರ