ಎಸ್‌ಸಿ/ಎಸ್‌ಟಿ ಬಡ್ತಿ ಮೀಸಲಾತಿ : ಮಾನದಂಡ ರೂಪಿಸಲು ಸುಪ್ರೀಂಕೋರ್ಟ್ ನಿರಾಕರಣೆ…

80
firstsuddi

ನವದೆಹಲಿ : ಸರ್ಕಾರಿ ಉದ್ಯೋಗಗಳಲ್ಲಿ ಬಡ್ತಿ ನೀಡುವಾಗ ಪರಿಶಿಷ್ಟ ಜಾತಿ (ಎಸ್‌ಸಿ) ಮತ್ತು ಪರಿಶಿಷ್ಟ ಪಂಗಡ (ಎಸ್‌ಟಿ) ನೌಕರರಿಗೆ ಮೀಸಲಾತಿ ನೀಡುವ ಕುರಿತು ಮಾನದಂಡವನ್ನು ರೂಪಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ನಿರಾಕರಿಸಿದೆ.

ಎಸ್‌ಸಿ ಮತ್ತು ಎಸ್‌ಟಿಗೆ ಸೇರಿದವರನ್ನು ಹಿಂದುಳಿದ ವರ್ಗಗಳ ಅರ್ಹತೆಯ ಮಟ್ಟಕ್ಕೆ ತರಲಾಗಿಲ್ಲ ಎಂಬುದು ಜೀವ ಮಾನದ ಸತ್ಯ ಎಂದು ಕೇಂದ್ರ ಸರ್ಕಾರವು ಈ ಹಿಂದೆ ನ್ಯಾಯಾಲಯಕ್ಕೆ ತಿಳಿಸಿತ್ತು. ಈ ಬಗ್ಗೆ 2021ರ ಅಕ್ಟೋಬರ್ 26 ರಂದು ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್ ತೀರ್ಪು ಕಾಯ್ದಿರಿಸಿತ್ತು. ಇಂದು ನ್ಯಾಯಮೂರ್ತಿಗಳಾದ ಎಲ್.ನಾಗೇಶ್ವರರಾವ್, ಸಂಜೀವ್ ಖನ್ನಾ ಹಾಗೂ ಬಿ.ಆರ್.ಗವಾಯಿ ಅವರಿರುವ ನ್ಯಾಯಪೀಠವು ಎಸ್‌ಸಿ/ಎಸ್‌ಟಿ ಬಡ್ತಿ ಮೀಸಲಾತಿ ಕುರಿತು ತೀರ್ಪು ಪ್ರಕಟಿಸಿತು.

ಬಡ್ತಿಯಲ್ಲಿ ಮೀಸಲಾತಿ ಜಾರಿಗೊಳಿಸುವಾಗ ಎಸ್‌ಸಿ/ಎಸ್‌ಟಿ ಜನರ ಪ್ರಾತಿನಿಧ್ಯವನ್ನು ನಿರ್ಧರಿಸುವ ಕೇಂದ್ರ ಮತ್ತು ರಾಜ್ಯಗಳಿಂದ ಪ್ರಮಾಣೀಕರಿಸಬಹುದಾದ ದತ್ತಾಂಶವನ್ನು ಸಂಗ್ರಹಿಸುವ ಅಗತ್ಯವನ್ನು ತೆಗೆದುಹಾಕುವ ಕೇಂದ್ರದ ಮನವಿಯನ್ನು ಸುಪ್ರೀಂ ತಿರಸ್ಕರಿಸಿದ್ದು, ಪ್ರಾತಿನಿಧ್ಯದ ಅಸಮರ್ಪಕತೆಯನ್ನು ನಿರ್ಧರಿಸಲು ನಾವು ಯಾವುದೇ ಅಳತೆಗೋಲನ್ನು ರೂಪಿಸಲು ಸಾಧ್ಯವಿಲ್ಲ. ಎಸ್‌ಸಿ/ಎಸ್‌ಟಿ ಪ್ರಾತಿನಿಧ್ಯಕ್ಕೆ ಸಂಬಂಧಿಸಿದಂತೆ ಪ್ರಮಾಣೀಕರಿಸಬಹುದಾದ ಡೇಟಾವನ್ನು ಸಂಗ್ರಹಿಸುವುದು ಸಂಬಂಧಪಟ್ಟ ರಾಜ್ಯಗಳ ಹೊಣೆಗಾರಿಕೆ. ಎಸ್‌ಸಿ/ಎಸ್‌ಟಿ ಪ್ರಾತಿನಿಧ್ಯದ ಅಸಮರ್ಪಕತೆಯನ್ನು ನಿರ್ಧರಿಸುವುದಕ್ಕಾಗಿ ಮಾನದಂಡ ನಿರ್ಣಯಿಸಲು ಆಯಾ ರಾಜ್ಯಗಳ ವಿವೇಚನೆಗೆ ಬಿಟ್ಟಿದ್ದೇವೆ ಎಂದು ತಿಳಿಸಿದೆ.