ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆಯುತ್ತಿದ್ದ ವೇಳೆ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು…

71
firstsuddi

ಮೈಸೂರು : ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆಯುತ್ತಿದ್ದ ವೇಳೆ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಟಿ.ನರಸೀಪುರ ತಾಲೂಕಿನ ವಿದ್ಯೋದಯ ಪರೀಕ್ಷಾ ಕೇಂದ್ರದಲ್ಲಿ ನಡೆದಿದೆ.

ಟಿ.ನರಸೀಪುರ ತಾಲೂಕಿನ ಅಕ್ಕೂರು ಗ್ರಾಮದ ನಿವಾಸಿ ಅನುಶ್ರೀ ಮೃತ ವಿದ್ಯಾರ್ಥಿನಿ. ಮಾದಾಪುರ ಪ್ರೌಢಶಾಲೆಯಲ್ಲಿ 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಅನುಶ್ರೀ ಪರೀಕ್ಷೆ ಬರೆಯುವ ವೇಳೆ ಕುಸಿದು ಬಿದ್ದಾಳೆ. ಕೂಡಲೇ ವಿದ್ಯಾರ್ಥಿಯನ್ನು ಪರೀಕ್ಷಾ ಕೇಂದ್ರದಲ್ಲಿದ್ದ ಸಿಬ್ಬಂದಿ ಟಿ.ನರಸೀಪುರದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ. ಟಿ ನರಸೀಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.