ಎಸ್‍ಪಿ ಮುಖ್ಯಸ್ಥ ಮುಲಾಯಂ ಸಿಂಗ್ ಸೊಸೆ ಬಿಜೆಪಿ ಸೇರ್ಪಡೆ…

95
firstsuddi

ಲಕ್ನೋ : ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಅವರ ಸೊಸೆ ಅಪರ್ಣಾ ಯಾದವ್ ಅವರು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.

ಇತ್ತೀಚೆಗೆ ಬಿಜೆಪಿ ಮಾಜಿ ಸಚಿವರಾಗಿದ್ದ ಸ್ವಾಮಿ ಪ್ರಸಾದ್ ಮೌರ್ಯ, ಧರ್ಮ ಸಿಂಗ್ ಸೈನಿ, ದರಾ ಸಿಂಗ್ ಚೌಹಾಣ್ ಅವರು ಪಕ್ಷ ತೊರೆದು ಸಮಾಜವಾದಿ ಪಕ್ಷ ಸೇರಿದರು. ಇದರ ಮಧ್ಯೆಯೇ ಅಖಿಲೇಶ್ ಯಾದವ್ ನಾದಿನಿ ಅಪರ್ಣಾ ಯಾದವ್ ಬಿಜೆಪಿ ಸೇರಲಿದ್ದಾರೆ ಎಂಬ ಮಾತುಗಳು ಕೇಳಿಬಂದಿದ್ದವು. ಅದರಂತೆಯೇ ಇಂದು ಅವರು ಅಧಿಕೃತವಾಗಿ ಬಿಜೆಪಿ ಸೇರಿದ್ದಾರೆ.

ಅಪರ್ಣಾ ಸಿಂಗ್ ಯಾದವ್ ಅವರು ಮುಲಾಯಂ ಸಿಂಗ್ ಅವರ ಕಿರಿಯ ಪುತ್ರ ಪ್ರತೀಕ್ ಯಾದವ್ ಅವರ ಪತ್ನಿ. ಇವರು 2017ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಸಮಾಜವಾದಿ ಪಕ್ಷದಿಂದ ಸ್ಪರ್ಧಿಸಿ, ಬಿಜೆಪಿಯ ರೀಟಾ ಬಹುಗುಣ ಜೋಶಿ ಎದುರು ಸೋಲೊಪ್ಪಿಕೊಂಡಿದ್ದರು. ಅದಾದ ಬಳಿಕ ಬಿಜೆಪಿ ಪಕ್ಷದ ಯೋಜನೆಗಳು ಹಾಗೂ ಕಾರ್ಯಕ್ರಮಗಳ ಬಗ್ಗೆ ಅಪರ್ಣಾ ಯಾದವ್ ಒಲವು ಹೊಂದಿದ್ದರು.