ಬೆಂಗಳೂರು : ನಾಳೆಯೇ (ಆಗಸ್ಟ್ 7) ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗುವುದು ಬಹುತೇಕ ಖಚಿತವಾಗಿದೆ. ಈಗಾಗಲೇ ಮೌಲ್ಯಮಾಪನ ಪೂರ್ಣಗೊಂಡಿದ್ದು, ಫಲಿತಾಂಶ ಪ್ರಕಟಿಸುವುದಕ್ಕೆ ಅಗತ್ಯ ಸಿದ್ಧತೆ ಕೈಗೊಳ್ಳಲಾಗಿದೆ. ಫಲಿತಾಂಶ ಪ್ರಕಟಿಸುವ ವಿಚಾರ ಕುರಿತು ಇಂದು ಇಲಾಖೆಯಲ್ಲಿ ಸಭೆ ನಡೆಯಲಿದೆ. ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಉಮಾಶಂಕರ್ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ಪ್ರಧಾನ ಕಾರ್ಯದರ್ಶಿಗಳ ಆದೇಶವೊಂದೇ ಬಾಕಿ ಇದೆ. ಈ ಹಿಂದೆಯೇ ಆಗಸ್ಟ್ 10ರೊಳಗೆ ಫಲಿತಾಂಶ ಪ್ರಕಟಿಸುವುದಾಗಿ ಈ ಹಿಂದಿನ ಸಚಿವರು ತಿಳಿಸಿದ್ದರು. ಸಿಎಂ ಜೊತೆ ಚರ್ಚಿಸಿ ನಾಳೆಯೇ ಫಲಿತಾಂಶ ಪ್ರಕಟಿಸಲು ಚಿಂತಿಸಲಾಗಿದೆ.
ಕೊರೊನಾ ಆತಂಕದ ನಡುವೆಯೂ ರಾಜ್ಯದಲ್ಲಿ ಜೂನ್ 19-22 ರಂದು ಪರೀಕ್ಷೆ ನಡೆದಿದ್ದು, 99.65% ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.
ಎಸ್ ಎಸ್ ಎಲ್ ಸಿ ಫಲಿತಾಂಶ ಬೋರ್ಡ್ ನ ಅಧಿಕೃತ ವೆಬ್ ಸೈಟ್ ಆದ www.sslc.kar.nic.in ಅಥವಾ karresults.nic.in ಫಲಿತಾಂಶ ಲಭ್ಯವಿರಲಿದೆ. ಹಾಗೆಯೇ ವಿದ್ಯಾರ್ಥಿಗಳಿಗೆ ನೋಂದಾಯಿತ ಮೊಬೈಲ್ ನಂಬರ್ ಗೆ ಎಸ್ ಎಂಎಸ್ ಮೂಲಕ ಸಂದೇಶ ರವಾನೆಯಾಗಲಿದೆ.










